Sunday, January 19, 2025

ಮಂಡ್ಯದ ಮನ್​​ಮುಲ್​​ನಲ್ಲಿ ಅಗ್ನಿ ಅವಘಡ!

ಮಂಡ್ಯ : ಇತ್ತೀಚೆಗೆ ಆರಂಭಗೊಂಡಿದ್ದ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿರುವ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಮನ್​ಮುಲ್​​ನ ಪ್ಯಾಕಿಂಗ್​ ಸೆಕ್ಷನ್​ನಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡು ಆತಂಕ ಸೃಷ್ಟಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹತ್ತಿರುವ ಕಟ್ಟಡದಲ್ಲಿ ಮಾರ್ನಿಂಗ್ ಶಿಫ್ಟ್​​ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹೊರಕ್ಕೆ ಓಡಿಬಂದಿದ್ದಾರೆ. ಅದೃಷ್ಟವಶಾತ್​ ಯಾವುದೆ ಪ್ರಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಪರಿಶೀಲನೆ!

ಬೆಂಕಿ ಅವಘಡದಿಂದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಸದ್ಯ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED ARTICLES

Related Articles

TRENDING ARTICLES