ಆನೇಕಲ್: ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ.
ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಸಿಐಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಚಿಕಿತ್ಸೆಯ ವೆಚ್ಚವನ್ನು ಸರ್ಕಾರದಿಂದ ಭರಿಸುವುದಾಗಿ ಘೋಷಿಸಿದ್ದಾರೆ.
ಇದನ್ನೂ ಓದಿ: ಡಿಕೆಶಿ ತಿಹಾರ್ ಜೈಲಿಗೆ ಹೋಗೋದು ಗ್ಯಾರೆಂಟಿ :ಡಿಕೆಶಿ ವಿರುದ್ದ ಹೆಚ್ಡಿಕೆ ಆಕ್ರೋಶ!
ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಟಾಕಿ ಮಾರಾಟ ಮಾಡುವ ಹಾಗೂ ದಾಸ್ತಾನು ಮಾಡುವ ಜಾಗದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಮುಖ್ಯವಾಗಿ ಇಲ್ಲಿ ಸ್ಪೋಟಕ ಕಾಯ್ದೆ ಉಲ್ಲಂಘನೆಯಾಗಿದ್ದು, ಘಟನೆಯಲ್ಲಿ 14 ಮಂದಿ ಮೃತಪಟ್ಟು, 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಪ್ರಕರಣವನ್ನು ನಾವು ಸಿಐಡಿಗೆ ಹಸ್ತಾಂತರಿಸುತ್ತಿದ್ಧೇವೆ. ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ತಪ್ಪು ಮಾಡಿದವರು ಯಾರೇ ಆದರೂ ಅವರನ್ನು ಕಠಿಣ ಕಾನೂನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.