ಬೆಂಗಳೂರು : ಬೈಯಪ್ಪನಹಳ್ಳಿ-ಕೆ.ಆರ್.ಪುರ ಮತ್ತು ಚಲಘಟ್ಟ-ಕೆಂಗೇರಿ ಮಾರ್ಗಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ್ದು, ಯಾವುದೇ ಔಪಚಾರಿಕ ಮತ್ತು ಅನೌಪಚಾರಿಕ ಕಾರ್ಯಕ್ರಮಗಳಿಗೆ ಕಾಯದೇ ತಕ್ಷಣ ಪ್ರಯಾಣಿಕರ ಹಿತದೃಷ್ಟಿಯಿಂದ ಸೇವೆಗೆ ಅಣಿಗೊಳಿಸಿ ಎಂದು ನಿರ್ದೇಶನ ನೀಡಿದೆ.
ಅಕ್ಟೋಬರ್ 9 ರಿಂದ ಎರಡು ಮೆಟ್ರೋ ಲೈನ್ಗಳ ಸಂಚಾರ ಆರಂಭಿಸಿ ಎಂದು ಕೇಂದ್ರ ಗೃಹ ಮತ್ತು ನಗರಾಭಿವೃದ್ಧಿ ವ್ಯವಹಾರ ಸಚಿವಾಲಯ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಇದನ್ನೂ ಓದಿ: ಡಿಕೆಶಿ ತಿಹಾರ್ ಜೈಲಿಗೆ ಹೋಗೋದು ಗ್ಯಾರೆಂಟಿ :ಡಿಕೆಶಿ ವಿರುದ್ದ ಹೆಚ್ಡಿಕೆ ಆಕ್ರೋಶ!
ನೀವು ಮೊದಲು ಸಂಚಾರ ಆರಂಭಿಸಿ. ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಎರಡು ವಾರಗಳಲ್ಲಿ ಪ್ರಧಾನಮಂತ್ರಿ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.