Friday, November 22, 2024

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಪರಿಶೀಲನೆ!

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡವು ಇಂದು ಪರಿಶೀಲಿಸುತ್ತಿದೆ.

ಬೀರಸಂದ್ರದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅತ್ತಿಬೆಲೆ ದುರಂತ: ಗೋದಾಮಿನ ಮಾಲೀಕರ ಮೇಲೆ ಕ್ರಮ- ಸಿಎಂ ಸಿದ್ದರಾಮಯ್ಯ

ಮೊದಲಿಗೆ ವಿಶ್ವನಾಥಪುರ ಬಳಿಯ ರೈತರ ಜಮೀನಿನಲ್ಲಿ ರಾಗಿ ಬೆಳೆಹಾನಿಯನ್ನು ವೀಕ್ಷಿಸಿದರು.
ಮಳೆ ಇಲ್ಲದೆ ತೆನೆ ಬರದ ರಾಗಿ ಬೆಳೆ ಕುರಿತು ರೈತರು ಅಳಲು ತೋಡಿಕೊಂಡರು. ಅಂತರ್ಜಲ ಬತ್ತಿರುವ ಕಾರಣ ಕಲ್ಲು ಬಾವಿಯಲ್ಲಿ ನೀರಿಲ್ಲ, ಸಾವಿರ ಅಡಿ ಕೊರೆದರೂ ಕೊಳವೆ ಬಾವಿಯಲ್ಲಿ ನೀರಿಲ್ಲ ಎಂದು ರೈತರು ಸಮಸ್ಯೆ ವಿವರಿಸಿದರು.

ತಂಡದ ಮುಖ್ಯಸ್ಥರು ಹಾಗೂ ಸದಸ್ಯರು ಸ್ವತಃ ರೈತರೊಂದಿಗೆ ಚರ್ಚಿಸಿ, ಬೆಳೆಹಾನಿಯ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಈ ವೇಳೆ ಕೇಂದ್ರ ಜಲ ಆಯೋಗದ ನಿರ್ದೇಶಕರಾದ ಅಶೋಕ್ ಕುಮಾರ್ ವಿ, ಎಂ.ಎನ್.ಸಿ.ಎಫ್.ಸಿ ಯ ಉಪನಿರ್ದೇಶಕ ಕರಣ್ ಚೌಧರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧೀನ ಕಾರ್ಯದರ್ಶಿ ಸಂಗೀತ್ ಕುಮಾರ್, ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರರಾದ ಡಾ.ಜಿ.ಎಸ್ ಶ್ರೀನಿವಾಸ ರೆಡ್ಡಿ ತಂಡದಲ್ಲಿದ್ದಾರೆ.

RELATED ARTICLES

Related Articles

TRENDING ARTICLES