Monday, December 23, 2024

ಯುದ್ಧ ಪೀಡಿತ ಪ್ರದೇಶದಿಂದ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ನಟಿ ನುಶ್ರತ್

ಬೆಂಗಳೂರು : ಪ್ರಸ್ತುತ ಇಸ್ರೇಲ್​ ಮತ್ತು ಪ್ಯಾಲೆಸ್ತೀನ್​ನ ಹಮಾಸ್​ ಉಗ್ರರ ಗುಂಪಿನ ನಡುವೆ ಉಂಟಾಗಿರುವ ಸಂಘರ್ಷದ ನಡುವೆ ಯುದ್ಧ ಪೀಡಿತ ಪ್ರದೇಶದಲ್ಲೇ ಸಿಲುಕಿದ್ದ ಬಾಲಿವುಡ್​ ನಟಿ ನುಶ್ರತ್ ಭರುಚ್ಚ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ.

ಹೈಫಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತಮ್ಮ ನಟನೆಯ ಅಕೆಲ್ಲಿಯ ಪ್ರದರ್ಶನಕ್ಕಾಗಿ ನುಶ್ರತ್ ಭರುಚ್ಚ ಇಸ್ರೇಲ್​ಗೆ ತೆರಳಿದ್ದರು. ಮಧ್ಯಾಹ್ನ 2 ಘಂಟೆ ಸುಮಾರಿಗೆ ಅವರು ಮುಂಬೈನಲ್ಲಿರುವ ಛತ್ರಪತಿ ವಿಮಾಣ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಯುದ್ಧ ಪೀಡಿತ ಇಸ್ರೇಲ್​ನಲ್ಲೇ ನಟಿ ನುಶ್ರತ್​ ಅವರು ಸಿಲುಕಿಕೊಂಡಿದ್ದು, ಅವರ ಕುಟುಂಬವನ್ನು ಆತಂಕಕ್ಕೆ ದೂಡಿತ್ತು. ಆದರೆ, ಇದೀಗ ಅವರು ಸುರಕ್ಷಿತವಾಗಿ ಭಾರತಕ್ಕೆ ಬಂದಿಳಿದಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ್ದ ನುಶ್ರತ್​ ತಂಡದ ಸದಸ್ಯರೊಬ್ಬರು ದುರಾದೃಷ್ಟವಶಾತ್​ ಸಂಘರ್ಷ ಪೀಡಿತ ಇಸ್ರೇಲ್​ನಲ್ಲಿ ನುಶ್ರತ್​ ಸಿಲುಕಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಇಸ್ರೇಲ್-ಪಾಲೆಸ್ತೀನ್ ಸಂಘರ್ಷ, 400 ಜನ ಸಾವು!

ಹೈಫಾ ಅಂತಾರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಸ್ರೇಲ್​ಗೆ ಹಾರಿದ್ದರು. ಶನಿವಾರ ಮಧ್ಯಾಹ್ನ 12.30ಕ್ಕೆ ಕೊನೆಯ ಬಾರಿಗೆ ಆಕೆಯೊಂದಿಗೆ ಸಂಪರ್ಕ ಸಾಧಿಸಿದ್ದೆ. ಬೇಸ್​ಮೆಂಟ್​ ಒಂದರಲ್ಲಿ ಸುರಕ್ಷಿತವಾಗಿ ಇರುವುದಾಗಿ ತಿಳಿಸಿದರು ಎಂದು ಮಾಹಿತಿ ನೀಡಿದ್ದರು.

RELATED ARTICLES

Related Articles

TRENDING ARTICLES