Wednesday, January 22, 2025

ಹಿರಿಯ ಲೇಖಕ, ಪತ್ರಕರ್ತ ಜಿ.ಎನ್​. ರಂಗನಾಥರಾವ್ ನಿಧನ : ಸಿಎಂ ಸಂತಾಪ

ಬೆಂಗಳೂರು : ಕನ್ನಡದ ಹಿರಿಯ ಲೇಖಕ ಹಾಗೂ ಪತ್ರಕರ್ತ ಜಿ.ಎನ್​. ರಂಗನಾಥರಾವ್ ಬೆಂಗಳೂರಿನಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬಸವನಗುಡಿಯ ಬಿಎಂಎಸ್​ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

1942ರಲ್ಲಿ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಬಳಿಯ ಗುಂಬಳ್ಳಿಯಲ್ಲಿ ರಂಗನಾಥರಾವ್ ಜನಿಸಿದರು. 60ರ ದಶಕದಲ್ಲಿ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ವೃತ್ತಿ ಆರಂಭಿಸಿದ್ದರ. ಬಳಿಕ, ಪ್ರಜಾವಾಣಿ ಸಂಪಾದಕರಾಗಿ, ಸಾಹಿತಿಯಾಗಿಯೂ ಹೆಸರು ಮಾಡಿದ್ದರು.

ಜಿ.ಎನ್​. ರಂಗನಾಥರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತು Xನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಹಿರಿಯ ಲೇಖಕ ಹಾಗೂ ಪತ್ರಕರ್ತ ಜಿ.ಎನ್. ರಂಗನಾಥ ರಾವ್ ಅವರ ನಿಧನದ ಸುದ್ದಿ ಆಘಾತವುಂಟುಮಾಡಿದೆ.

ಪತ್ರಿಕೋದ್ಯಮಿಯಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಾಡು ನುಡಿಯ ಉನ್ನತಿಗಾಗಿ ದುಡಿದಿದ್ದರು. ರಂಗನಾಥ ರಾವ್ ಅವರ ಅಗಲಿಕೆ ನಾಡಿನ ಪತ್ರಿಕಾರಂಗ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಮತ್ತು ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES