Wednesday, January 22, 2025

ಮತ್ತೆ ಆಘಾತ..! ಅಘ್ಫಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಶುಭ್​ಮನ್​ ಗಿಲ್ ಅಲಭ್ಯ

ಬೆಂಗಳೂರು : ಏಕದಿನ ವಿಶ್ವಕಪ್-2023 ಟೂರ್ನಿಯಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧದ ಮುಂದಿನ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಮತ್ತೆ ಆಘಾತ ಎದುರಾಗಿದೆ.

ಜ್ವರದಿಂದ ಬಳಲುತ್ತಿರುವ ಆರಂಭಿಕ ಬ್ಯಾಟರ್ ಶುಭ್​ಮನ್ ಗಿಲ್ ಎರಡನೇ ಪಂದ್ಯದಿಂದ ದೂರ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಗಿಲ್​ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು, ಶುಭ್‌ಮನ್ ಗಿಲ್ ಅವರು 9 ಅಕ್ಟೋಬರ್ (ಇಂದು) 2023ರಂದು ದೆಹಲಿಗೆ ತಂಡದೊಂದಿಗೆ ಪ್ರಯಾಣಿಸುವುದಿಲ್ಲ. ಚೆನ್ನೈನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಅಲಭ್ಯರಾಗಿದ್ದ ಅವರು ಅಫ್ಘಾನಿಸ್ತಾನ ವಿರುದ್ಧದ ಮುಂದಿನ ಪಂದ್ಯದಲ್ಲೂ ಅಲಭ್ಯರಾಗಲಿದ್ದಾರೆ ಎಂದು ಹೇಳಿದ್ದಾರೆ.

ವೈದ್ಯರ ನಿಗಾದಲ್ಲಿ ಗಿಲ್

ಗಿಲ್​ ಅವರು ಅಕ್ಟೋಬರ್ 11ರಂದು ದೆಹಲಿಯಲ್ಲಿ ಹಾಗೂ ಮತ್ತೆ ಚೆನ್ನೈನಲ್ಲಿ ಉಳಿದುಕೊಳ್ಳುತ್ತಾರೆ.  ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿರುತ್ತಾರೆ ಎಂದು ತಿಳಿಸಿದ್ದಾರೆ. ಮುಂದಿನ ಪಂದ್ಯಗಳ ಹಿತದೃಷ್ಟಿಯಿಂದ ಅಘ್ಘಾನಿಸ್ತಾನ ಪಂದ್ಯಕ್ಕೂ ಗಿಲ್​ ಅವರು ಅಲಭ್ಯರಾಗಲಿದ್ದಾರೆ. ಸಂಪೂರ್ಣ ಗುಣಮುಖರಾದ ಬಳಿಕ ತಂಡವನ್ನು ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.

RELATED ARTICLES

Related Articles

TRENDING ARTICLES