Saturday, May 11, 2024

ಇಂದು ಕೂಡ ರಾಜ್ಯದ ಹಲವೆಡೆ ಮಳೆ ಸಾಧ್ಯತೆ!

ಬೆಂಗಳೂರು : ನಗರ ಸೇರಿದಂತೆ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: ಅಕ್ರಮವಾಗಿ ಕಸಾಯಿಖಾನೆಗೆ ರಾಸುಗಳ ಸಾಗಿಸುತ್ತಿದ್ದ ವಾಹನ ಪಲ್ಟಿ?

ಇನ್ನುಳಿದಂತೆ ಶಿವಮೊಗ್ಗ, ತುಮಕೂರು, ವಿಜಯನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಮುಸುಕಿದ ವಾತಾವರಣವಿರಲಿದ್ದು, ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

RELATED ARTICLES

Related Articles

TRENDING ARTICLES