Monday, December 23, 2024

ಹೆಚ್​ ಡಿ ರೇವಣ್ಣ ಆಪ್ತನ ಮೇಲೆ ಅಟ್ಯಾಕ್​ :ಕೊಲೆಗೆ ಯತ್ನ!

ಹಾಸನ: ಮಾಜಿ ಸಚಿವ ಎಚ್​ಡಿ ರೇವಣ್ಣ ಅವರ ಆಪ್ತ ಹಾಗು ಗುತ್ತಿಗೆದಾರನ ಮೇಲೆ ಅಟ್ಯಾಕ್​ ಮಾಡಿ ಕೊಲೆಗೆ ವಿಫಲಯತ್ನ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದ ಬಳಿ ನಡೆದಿದೆ.

ಅಶ್ವಥ್​, ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಪ್ರಥಮ ದರ್ಜೆ ಗುತ್ತಿಗೆದಾರ, ಮಂಗಳವಾರ ಸಂಜೆ ಹಾಸನದಿಂದ ಎಚ್.ಡಿ.ರೇವಣ್ಣ ಅವರ ಜೊತೆ ಹೊಳೆನರಸೀಪುರದ ಮನೆಗೆ ತೆರಳಿದ್ದ ಅಶ್ವಥ್, ಕೆಲಕಾಲ ರೇವಣ್ಣ ಅವರ ನಿವಾಸದಲ್ಲಿದ್ದು ಬಳಿಕ ಚನ್ನರಾಯಪಟ್ಟಣದ ತಮ್ಮ ನಿವಾಸಕ್ಕೆ KA-53 MF 5555 ನಂಬರ್ ಫಾರ್ಚುನರ್ ಕಾರಿನಲ್ಲಿ ಹೊರಟಿದ್ದರು.

ಅಶ್ವಥ್ ಮನೆಗೆ ಹೊರಟಿರುವ ಬಗ್ಗೆ ಮಾಹಿತಿ ತಿಳಿದು ಸೂರನಹಳ್ಳಿ ಹಂಪ್ಸ್ ಬಳಿ ಐದರಿಂದ ಆರು ಮಂದಿ ಅಪರಿಚಿತರು ಕಾರಿನ ಮೇಲೆ ದಾಳಿ ನಡೆಸಿದ್ದಾರೆ, ಕಲ್ಲಿನಿಂದ ಕಾರಿನ ಗ್ಲಾಸ್ ಮೇಲೆ ಕಲ್ಲು ಎತ್ತಿಹಾಕಿ ಮಾರಕಾಸ್ತ್ರಗಳಿಂದ ಕೊಲೆ ಮಾಡಲು ಮುಂದಾಗಿದ್ದಾರೆ. ಕೂಡಲೇ ಕಾರು ರಿವರ್ಸ್ ತೆಗೆದು ವೇಗವಾಗಿ ಕಾರು ಓಡಿಸಿ ಎಸ್ಕೇಪ್ ಆಗಿದ್ದಾರೆ. ಆದರೇ, ದುಷ್ಕರ್ಮಿಗಳು ಮೂಡಲಹಿಪ್ಪೆ ಗ್ರಾಮದವರೆಗೂ ಅಶ್ವಥ್ ಅವರನ್ನು ಹಿಂಭಾಲಿಸಿ ಬಂದಿದ್ದಾರೆ.

ಕೂಡಲೇ ಕೊಲೆ ಯತ್ನದ ಕುರಿತು ಚನ್ನರಾಯಪಟ್ಟಣ ಪೊಲೀಸ್ ಠಾಣೆಗೆ ಗುತ್ತಿಗೆದಾರ ಅಶ್ವಥ್​ ದೂರು ನೀಡಿದ್ದಾರೆ.

RELATED ARTICLES

Related Articles

TRENDING ARTICLES