Wednesday, January 22, 2025

ಇಂದು ಕಾವೇರಿ ನಿಯಂತ್ರಣ ಸಮಿತಿ ಸಭೆ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ ಇಂದು ಸಭೆ ಸೇರಲಿದೆ. ನವದೆಹಲಿಯ CWRC ಕಚೇರಿಯಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ ನಿಗಮದ MD ಮಹೇಶ್ ಭಾಗಿಯಾಗಲಿದ್ದಾರೆ.

ಇನ್ನು ತಮಿಳುನಾಡು, ಕೇರಳ, ಪುದುಚೇರಿ ಅಧಿಕಾರಿಗಳು, ವಕೀಲರು ಭಾಗವಹಿಸಲಿದ್ದಾರೆ. ಕಳೆದ ಬಾರಿ ತಮಿಳುನಾಡಿಗೆ 15 ದಿನ ನಿತ್ಯ 3 ಸಾವಿರ ಕ್ಯುಸೆಕ್‌ ನೀರು ಬಿಡುವಂತೆ ಆದೇಶಿಸಿದ್ದ ಸಮಿತಿ, ಈ ಬಾರಿ ಯಾವ ಆದೇಶ ನೀಡಲಿದೆ ಎನ್ನುವ ಆತಂಕ ಮನೆಮಾಡಿದೆ.

ಇದನ್ನೂ ಓದಿ: ಗಾಂಧಿ ಪ್ರತಿಮೆ ಮುಂದೆ ಮುನಿರತ್ನ ಉಪವಾಸ ಸತ್ಯಾಗ್ರಹ!

ಕಾವೇರಿ ಜಲಾನಯನ ಪ್ರದೇಶದ ಹಲವು ತಾಲೂಕುಗಳಲ್ಲಿ ಬರ ಘೋಷಣೆಯಾಗಿರುವುದು ಸೇರಿ ರಾಜ್ಯದಲ್ಲಿ ನೀರಿನ ಕೊರತೆ ಕುರಿತು ಅಧಿಕಾರಿಗಳು ಮತ್ತೊಮ್ಮೆ ಸಭೆಯ ಗಮನಕ್ಕೆ ತರಲು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನೊಂದೆಡೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ಪ್ರತಿಭಟನೆಗಳು ಮುಂದುವರೆದಿವೆ.

ಇಂದಿನ ಸಭೆಯಲ್ಲಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಎಷ್ಟಿದೆ? ಒಳಹರಿವು ಎಷ್ಟಿದೆ ಎಂಬುದರ ಮಾಹಿತಿ ಸಂಗ್ರಹಿಸಲಾಗುತ್ತದೆ. ಒಳಹರಿವಿನ ಪ್ರಮಾಣವನ್ನು ನೋಡಿಕೊಂಡು ಹೊಸ ಆದೇಶ ಬರುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES