Wednesday, January 22, 2025

ಅಪ್ಪನ ಹೆಗಲು ಮೇಲೆ ಕೂತು ದಸರಾ ನೋಡುತ್ತಿದ್ದೆ : ಸಿದ್ದರಾಮಯ್ಯ

ಬೆಂಗಳೂರು : ದಸರಾ ನನ್ನೂರ ಹಬ್ಬ. ನಾನು ಬಾಲ್ಯದಲ್ಲಿ ಅಪ್ಪನ ಹೆಗಲು ಮೇಲೆ ಕೂತು ದಸರಾ ನೋಡುತ್ತಿದ್ದೆ. ಈಗ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತದ್ದು ನನ್ನ ಸೌಭಾಗ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಈ ಕುರಿತು Xನಲ್ಲಿ ಪೋಸ್ಟ್ ಮಾಡಿರುವ ಅವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರ ನೇತೃತ್ವದ ನಿಯೋಗವು ಇಂದು ವಿಶ್ವ ವಿಖ್ಯಾತ ದಸರಾದ ಆಹ್ವಾನಪತ್ರಿಕೆ ನೀಡಿದೆ. ಈ ಸಂದರ್ಭದಲ್ಲಿ ಅತ್ಯಂತ ಸಂತೋಷದಿಂದ ಅವರ ಆಹ್ವಾನ ಸ್ವೀಕರಿಸಿ, ಆಗಮಿಸುವುದಾಗಿ ತಿಳಿಸಿದೆ ಎಂದು ತಿಳಿಸಿದ್ದಾರೆ.

ಸಚಿವ ಹೆಚ್.ಸಿ.ಮಹದೇವಪ್ಪನವರ ನೇತೃತ್ವದ ಜಿಲ್ಲಾಡಳಿತದ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮೈಸೂರು ದಸರಾ ಆಹ್ವಾನಪತ್ರಿಕೆ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮೈಸೂರು ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ರಾಜೇಂದ್ರ, ಪೊಲೀಸ್ ಆಯುಕ್ತ ರಮೇಶ್ ಬಾನೂತ್, ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗಾಯತ್ರಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಹಾಜರಿದ್ದರು.

RELATED ARTICLES

Related Articles

TRENDING ARTICLES