ಬೆಂಗಳೂರು: ತಮ್ಮ ಕ್ಷೇತ್ರಕ್ಕೆ ನೀಡಬೇಕಾದ ಅನುದಾನವನ್ನು ತಡೆಹಿಡದ ಹಿನ್ನೆಲೆ ಅನುದಾನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಇಂದು ರಾಜರಾಜೇಶ್ವರ ನಗರದ ಶಾಸಕ ಮುನಿರತ್ನ ಡಿಸಿಎಂ ಡಿ.ಕೆ ಶಿವಕುಮಾರ್ ಕಾಲಿಗೆ ಬಿದ್ದ ಘಟನೆ ನಡೆದಿದೆ.
ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಮೌನ ಪ್ರತಿಭಟನೆ ಮಾಡಿದ ಬಳಿಕ ಶಾಸಕ ಮುನಿರತ್ನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರನ್ನು ಭೇಟಿಯಾಗಿ ಅವರ ಕಾಲಿಗೆ ಬಿದ್ದು ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಇದು ಝೀರೊ ಅನುದಾನ ಸರ್ಕಾರ: ಕಾಂಗ್ರೆಸ್ ವಿರುದ್ದ ಮಾಜಿ ಸಿಎಂ ಬೊಮ್ಮಾಯಿ ಕಿಡಿ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜರಾಜೇಶ್ವರಿ ನಗರಕ್ಕೆ ಸುಮಾರು 126 ಕೋಟಿ ಅನುದಾನವನ್ನು ನೀಡಲಾಗಿತ್ತು, ಈ ಅನುದಾನವನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನುದಾನ ತಡೆಹಿಡಿದು, ಬಳಿಕ ಅದನ್ನು ಬೇರೆ ಬೇರೆ ಉದ್ದೇಶಗಳ ಬಳಕೆಗೆ ವರ್ಗಾಯಿಸಲಾಗಿತ್ತು. ಆರ್ ಆರ್ ನಗರದಲ್ಲಿ ನಡೆಯಬೇಕಾಗಿದ್ದ ಎಲ್ಲಾ ಕಾಮಗಾರಿಗಳಿಗೆ ತಡೆ ನೀಡಿದಂತಾಗಿತ್ತು.
ಇದನ್ನು ವಿರೋಧಿಸಿ ಇಂದು ಶಾಸಕ ಮುನಿರತ್ನ ವಿಧಾನಸೌಧದ ಮುಂಭಾಗ ಮೌನ ಪ್ರತಿಭಟನೆ ನಡೆಸಿ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಭಾಗಿಯಾಗಿದ್ದ ಕಂಬಳ ಕಾರ್ಯಕ್ರಮದ ವೇದಿಕೆ ಬಳಿಗೆ ತೆರಳಿ ಅವರ ಕಾಲಿಗೆ ಬಿದ್ದು ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಈ ವೇಳೆ ಮಾಜಿ ಸಚಿವ ಅಶ್ವಥ್ನಾರಾಯಣ್, ಡಿ.ವಿ ಸದಾನಂಸಗೌಡ, ಸಂಗೀತ ನಿರ್ದೇಶಕ ಗುರುಕಿರಣ್ ಹಲವು ಮುಖಂಡರು ಇದ್ದರು.