Wednesday, January 22, 2025

ಗಾಂಧಿ ಪ್ರತಿಮೆ ಮುಂದೆ ಮುನಿರತ್ನ ಉಪವಾಸ ಸತ್ಯಾಗ್ರಹ!

ಬೆಂಗಳೂರು : ತಮ್ಮ ಕ್ಷೇತಕ್ಕೆ ನೀಡಬೇಕಾದ ಅನುದಾನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಇಂದು ವಿಧಾನಸೌದದ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ.

ಆರ್ ಆರ್ ನಗರಕ್ಕೆಂದು 126 ಕೋಟಿ ಹಣ ಮೀಸಲಿರಿಸಲಾಗಿತ್ತು. ಈ ಹಣವನ್ನು ತಡೆ ಹಿಡಿದಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಬೇರೆ ಬೇರೆ ಉದ್ದೇಶಗಳಿಗೆ ಬಳಕೆ ಮಾಡಿ ನನ್ನ ಕ್ಷೇತ್ರಕ್ಕೆ ಅನ್ಯಾಯ ಮಾಡುತ್ತಿದ್ದಾರೆ.

ಇದನ್ನೂ ಓದಿ: ಜೋಹಾನ್ಸ್‌ಬರ್ಗ್‌ನಲ್ಲಿ ಗಾಂಧಿ ಪ್ರತಿಮೆ ಅನಾವರಣ!

ಇಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಮುನಿರತ್ನಗೆ ಬಿಜೆಪಿಯ ಕೆಲ ಮುಖಂಡರು ಹಾಗು ಬೆಂಗಳೂರು ಶಾಸಕರು ಸಾಥ್ ನೀಡಲಿದ್ದಾರೆ.

RELATED ARTICLES

Related Articles

TRENDING ARTICLES