Tuesday, November 5, 2024

ಸುಳ್ಳು ಪ್ರಕರಣ ದಾಖಲಿಸಿ AAP ಹತ್ತಿಕ್ಕುವ ಯತ್ನ: ದೆಹಲಿ ಸಿಎಂ ಕೇಜ್ರಿವಾಲ್ ಆಕ್ರೋಶ!

ದೆಹಲಿ: ಆಮ್ ಆದ್ಮಿ ಪಕ್ಷವನ್ನು ಕೊನೆಗಾಣಿಸಲು ಪ್ರಯತ್ನಿಸಲಾಗುತ್ತಿದೆ. ಅದಕ್ಕಾಗಿ ಪಕ್ಷದ ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದರು.

AAP ಶಾಸಕ ಅಮಾನತುಲ್ಲಾ ಖಾನ್ ನಿವಾಸದ ಮೇಲೆ ED ದಾಳಿ ಅಂತ್ಯವಾದ ಬೆನ್ನಲ್ಲೆ ಅವರ ನಿವಾಸಕ್ಕೆ ತೆರಳಿದ ಸಿಎಂ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದರು. ಖಾನ್ ಸೇರಿದಂತೆ ಇತರ ಕೆಲವು ನಾಯಕರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತನಿಖೆ ನಡೆಸಲಾಗುತ್ತಿದೆ. ನಮ್ಮ ನಾಯಕರ ವಿರುದ್ಧ ಈವರೆಗೂ 170 ಪ್ರಕರಣಗಳು ದಾಖಲಾಗಿವೆ. ಆದರೆ ಅವುಗಳಲ್ಲಿ140 ಪ್ರಕರಣಗಳಲ್ಲಿ ತೀರ್ಪುಗಳು ನಮ್ಮ ಪರವಾಗಿವೆ ಎಂದು ಹೇಳಿದರು.

ಇದನ್ನೂ ಓದಿ: ನೂತನ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ!

ಕಳೆದ ಕೆಲವು ತಿಂಗಳುಗಳಲ್ಲಿ ನಮ್ಮ ಹಿರಿಯ ನಾಯಕರು ಹಾಗೂ ಸಚಿವರನ್ನು ಬಂಧಿಸಲು ಆರಂಭಿಸಿದ್ದಾರೆ. ಈ ದಾಳಿಗಳು ಎಎಪಿಯನ್ನು ಕೊನೆಗೊಳಿಸುವ ಅಭಿಯಾನದ ಭಾಗವಾಗಿದೆ ಎಂದು ಹೇಳಿದರು. BJP ಆಡಳಿತವಿರುವ ರಾಜ್ಯಗಳಲ್ಲಿ ED ಅಥವಾ ಕೇಂದ್ರೀಯ ತನಿಖಾದಳ ಯಾವುದೇ ವಿಚಾರಣೆ ನಡೆಸುತ್ತಿಲ್ಲ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಬಿಜೆಪಿ ಭ್ರಷ್ಟಾಚಾರವನ್ನು ಕೊನೆಗೊಳಿಸುವುದಿಲ್ಲ. ಆದರೆ ಅದರ ಹೆಸರಿನಲ್ಲಿ ವಿರೋಧ ಪಕ್ಷದ ನಾಯಕರಿಗೆ ತೊಂದರೆ ನೀಡುತ್ತದೆ ಎಂದು ಎಂದು ಆರೋಪಿಸಿದರು.

RELATED ARTICLES

Related Articles

TRENDING ARTICLES