Thursday, January 23, 2025

ಹಳೆಯ ನೆನಪು ಮೆಲುಕು ಹಾಕಿದ ಡಿಸಿಎಂ ಡಿ.ಕೆ ಶಿವಕುಮಾರ್​

ಮೈಸೂರು : ಮೈಸೂರಿನ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟವನ್ನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟನೆ ಮಾಡಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಒಂದು ಕಾಲದಲ್ಲಿ ನೀವು ಕುಳಿತ ಜಾಗದಲ್ಲೇ ನಾನು ಕುಳಿತುಕೊಂಡಿದ್ದೆ. ಗ್ರಾಮೀಣ ಭಾಗದಿಂದ ಬಂದಂತಹ ನೀವೆಲ್ಲಾ ನನ್ನಂತೆ ನಾಯಕರಾಗಿ ಹೊರಹೊಮ್ಮಬೇಕು. ಕ್ರೀಡಾ ಕ್ಷೇತ್ರದಲ್ಲಿ ಭಾರತಕ್ಕೆ ಆಸ್ತಿಗಳಾಗಿ ಬೆಳಗಬೇಕು ಎಂದು ಸ್ಪೂರ್ತಿಯ ಮಾತುಗಳನ್ನಾಡಿದರು.

ಇದನ್ನೂ ಓದಿ: ಹೆತ್ತಮಗಳ ಕತ್ತು ಕೊಯ್ದು ತಂದೆ !

ನನ್ನ 16 ನೇ ವಯಸ್ಸಿನಲ್ಲಿ ನಿಮ್ಮಂತೆ ಕ್ರೀಡೆಗಾಗಿ ಬಂದಿದ್ದೆ. 14.5 ಕಿಲೋ ಮೀಟರ್ ದೂರದ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಸೋತು ಮನೆಗೆ ಹೋಗಿದ್ದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಳೆಯ ನೆನಪನ್ನು ಮೆಲುಕು ಹಾಕಿದರು.

RELATED ARTICLES

Related Articles

TRENDING ARTICLES