Thursday, September 19, 2024

99 ರೂಪಾಯಿಗೆ ಮಲ್ಟಿಪ್ಲೆಕ್ಸ್​ನಲ್ಲಿ ಸಿನಿಮಾ!

ಬೆಂಗಳೂರು: ಅಕ್ಟೋಬರ್ 13ರಂದು ರಾಷ್ಟ್ರಾದ್ಯಂತ ರಾಷ್ಟ್ರೀಯ ಸಿನಿಮಾ ದಿನವನ್ನು ಆಚರಿಸಲಾಗುತ್ತಿದೆ. ಈ ವಿಶೇಷ ದಿನದಂದು ಮಲ್ಟಿಪ್ಲೆಕ್ಸ್​ನಲ್ಲಿ ಭರ್ಜರಿ ಆಫರ್ ನೀಡಲಾಗುತ್ತಿದೆ.

ಕಳೆದ ವರ್ಷ ಈ ದಿನದಂದು ಟಿಕೆಟ್ ದರ 75 ರೂಪಾಯಿ ನಿಗದಿ ಮಾಡಲಾಗಿತ್ತು. ಇದಕ್ಕೆ ಭರ್ಜರಿ ಮೆಚ್ಚುಗೆ ಸಿಕ್ಕಿತ್ತು. ಮಲ್ಟಿಪ್ಲೆಕ್ಸ್​ಗಳು ಹೌಸ್​ಫುಲ್ ಆಗಿದ್ದವು. ಈ ವರ್ಷವೂ ರಾಷ್ಟ್ರೀಯ ಸಿನಿಮಾ ದಿನಾಚರಣೆ ಅಂಗವಾಗಿ ಟಿಕೆಟ್ ದರ 99 ರೂಪಾಯಿ ನಿಗದಿ ಮಾಡಲಾಗಿದೆ.

ಈ ಮೂಲಕ ಕೈಗೆಟಕುವ ದರದಲ್ಲಿ ಮಲ್ಟಿಪ್ಲೆಕ್ಸ್​​ನಲ್ಲಿ ಸಿನಿಮಾ ವೀಕ್ಷಿಸುವ ಅವಕಾಶ ಸಿಕ್ಕಿದೆ. 2023ರಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗಿ ಯಶಸ್ಸು ಕಂಡಿವೆ. ಶಾರುಖ್ ಖಾನ್ ಅವರು ಬ್ಯಾಕ್ ಟು ಬ್ಯಾಕ್ ಎರಡು ಹಿಟ್ ಸಿನಿಮಾ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇಂದಿನಿಂದ 4 ದಿನ ವಿದ್ಯುತ್ ವ್ಯತ್ಯಯ!

‘ಗದರ್ 2’, ‘ಕೌಸಲ್ಯ ಸುಪ್ರಜಾ ರಾಮ’, ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’, ‘ಸಪ್ತ ಸಾಗರದಾಚೆ ಎಲ್ಲೋ’ ಸೇರಿ ಅನೇಕ ಚಿತ್ರಗಳು ಒಳ್ಳೆಯ ಬಿಸ್ನೆಸ್ ಮಾಡಿವೆ. ಈ ರೀತಿಯ ಹಿಟ್ ಚಿತ್ರಗಳನ್ನು ಮಲ್ಟಿಪ್ಲೆಕ್ಸ್​​ನಲ್ಲಿ ನೋಡಬೇಕು ಎನ್ನುವ ಆಸೆ ಅನೇಕರಿಗೆ ಇರುತ್ತದೆ. ಆದರೆ, ಟಿಕೆಟ್ ದರ ದುಬಾರಿ ಇರುವುದರಿಂದ ಮಲ್ಟಿಪ್ಲೆಕ್ಸ್​ನಲ್ಲಿ ಚಿತ್ರ ವೀಕ್ಷಿಸೋಕೆ ಕೆಲವರಿಗೆ ಸಾಧ್ಯವಾಗುವುದಿಲ್ಲ. ಈಗ ‘ರಾಷ್ಟ್ರೀಯ ಸಿನಿಮಾ ದಿನ’ದ ಪ್ರಯುಕ್ತ 99 ರೂಪಾಯಿಗೆ ಸಿನಿಮಾ ಟಿಕೆಟ್​ ಮಾರಲು ತೀರ್ಮಾನಿಸಲಾಗಿದೆ.

RELATED ARTICLES

Related Articles

TRENDING ARTICLES