ಮೈಸೂರು : ಮಹಿಷ ದಸರಾ ಆಚರಣೆಗೆ ಕೊನೆಗೂ ಅನುಮತಿ ನೀಡಲಾಗಿದೆ. ಮೈಸೂರು ನಗರ ಪೊಲೀಸ್ ಆಯುಕ್ತರು ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ ನೀಡಿದ್ದಾರೆ. ಮೈಸೂರಿನ ಪುರಭವನದಲ್ಲಿ ಮಹಿಷ ದಸರಾ ನಡೆಯಲಿದೆ. ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದಿದ್ದಾರೆ.
ಮಹಿಷ ದಸರಾ ಆಚರಣೆ ವೇಳೆ ಮೆರವಣಿಗೆ, ರ್ಯಾಲಿ, ಪ್ರತಿಭಟನೆ ಮಾಡಬಾರದು. ನೇರವಾಗಿ ಸಭಾ ಕಾರ್ಯಕ್ರಮ ಪ್ರಾರಂಭಿಸಬೇಕು. ಪಟಾಕಿ ಸಿಡಿಸಿ ಸಂಭ್ರಮ ಆಚರಿಸಬಾರದು. ಧಾರ್ಮಿಕ ಭಾವನೆ ಕೆಣಕುವ, ಪ್ರಚೋದನೆ ನೀಡುವ ಭಾಷಣ ಮಾಡಬಾರದು ಎಂದು ಷರತ್ತುಗಳೊಂದಿಗೆ ಅನುಮತಿ ನೀಡಲಾಗಿದೆ.
ಚಾಮುಂಡಿ ಬೆಟ್ಟ ಚಲೋಗಿಲ್ಲ ಅನುಮತಿ
ಸಂಸದ ಪ್ರತಾಪ್ ಸಿಂಹ ಅವರು ಮಹಿಷ ದಸರಾ ಆಚರಣೆ ತಡೆಯಲು ನಾವು ಸಂಘರ್ಷಕ್ಕೆ ಸಿದ್ಧರಿದ್ದೇವೆ ಎಂದು ಹೇಳಿದ್ದರು. ಸುಮಾರು ಐದು ಸಾವಿರ ಜನರೊಂದಿಗೆ ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಳ್ಳಲಾಗುವುದು ಅಂತ ತಿಳಿಸಿದ್ದರು. ಇದಕ್ಕೆ ಕೂಡ ಅನುಮತಿ ತೆಗೆದುಕೊಳ್ಳಬೇಕು. ಆದರೆ, ಮೈಸೂರು ನಗರ ಪೊಲೀಸ್ ಆಯುಕ್ತರು ಮಹಿಷ ದಸರಾಗೆ ಮಾತ್ರ ಅನುಮತಿ ನೀಡಿದ್ದಾರೆ.