ಮಾಸ್ಕೋ: ಇಸ್ರೇಲ್ಗೆ ಸೇನಾ ನೆರವು ನೀಡುವ ಮೂಲಕ ಅಮೆರಿಕ ಪ್ಯಾಲೆಸ್ತೀನಿಯನ್ನರ ಹಿತಾಸಕ್ತಿಗಳನ್ನು ಕಡೆಗಣಿಸುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಿಡಿಕಾರಿದ್ದಾರೆ.
ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಹಿಂಸಾಚಾರದ ಸ್ಫೋಟವು ಮಧ್ಯಪ್ರಾಚ್ಯದಲ್ಲಿ ಅಮೆರಿಕ ನೀತಿ ವಿಫಲವಾಗಿದೆ. ಪ್ಯಾಲೆಸ್ಟೀನಿಯನ್ನರ ಅಗತ್ಯಗಳನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
ಇದನ್ನೂ ಓದಿ: ಸುಳ್ಳು ಪ್ರಕರಣ ದಾಖಲಿಸಿ AAP ಹತ್ತಿಕ್ಕುವ ಯತ್ನ: ದೆಹಲಿ ಸಿಎಂ ಕೇಜ್ರಿವಾಲ್ ಆಕ್ರೋಶ!
ಈ ಬಗ್ಗೆ ಪುಟಿನ್ ಹೇಳಿಕೆ ಬಿಡುಗಡೆ ಮಾಡಿ ಮಾತನಾಡಿದ ಪುಟಿನ್ ಅವರ ವಕ್ತಾರ ಡಿಮಿಟ್ರಿ ಪೆಸ್ಕೋವ್, ರಷ್ಯಾ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಎರಡೂ ಬದಿಗಳೊಂದಿಗೆ ಸಂಪರ್ಕದಲ್ಲಿದೆ. ಸಂಘರ್ಷವನ್ನು ಪರಿಹರಿಸುವಲ್ಲಿ ಪ್ರಯತ್ನಿಸುತ್ತದೆ ಎಂದು ಹೇಳಿದರು.