Wednesday, January 22, 2025

ಜನರಿಗೆ ಕೊಟ್ಟ ಭರವಸೆ ಈಡೇರಿಸಿದ್ದು ಕಾಂಗ್ರೆಸ್: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಕಳೆದ ಐದು ವರ್ಷದಲ್ಲಿ ಅಧಿಕಾರಕ್ಕೆ ಬಂದ ಮೂವರು ಮುಖ್ಯಮಂತ್ರಿಗಳು ಜನರಿಗೋಸ್ಕರ ಏನು ಮಾಡಿದರು. ಕಾಂಗ್ರೆಸ್‌ ಜನರಿಗೆ ಕೊಟ್ಟಿದ್ದ ಭರವಸೆ ಈಡೇರಿಸಿದೆ ಅಂತಾ ಒಂದು ಕುಟುಂಬಕ್ಕೆ ಸರ್ಕಾರದಿಂದ ಎಷ್ಟು ಸಿಕ್ತಿದೆ ಲೆಕ್ಕ ಹಾಕಿ. ಮುಂದಿನ ಚುನಾವಣೆಯಲ್ಲಿ ಯಾರನ್ನ ಬೆಂಬಲಿಸಬೇಕು ಎಂಬ ಬಗ್ಗೆ ತೀರ್ಮಾನಿಸಿ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ಬೆಳ್ಳೂರಿನಲ್ಲಿ MDCC ಬ್ಯಾಂಕ್‌ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗುಂಪುಗಳಿಗೆ ಸಾಲ ವಿತರಿಸಿ ಮಾತನಾಡಿ, ಚಿನ್ನ ಇಟ್ಟು ಸಾಲ ತೆಗೆದುಕೊಳ್ಳಿ ನಮ್ಮ ಸರ್ಕಾರ ಬಂದ ತಕ್ಷಣ ಎಲ್ಲಾ ಸಾಲವನ್ನು ಮನ್ನಾ ಮಾಡುತೇವೆ ಎಂದು ಕಳೆದ 2018 ರ ಚುನಾವಣೆ ಸಂದರ್ಭದಲ್ಲಿ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಭರವಸೆ ಕೊಟ್ಟಿದ್ದರು. ಆ ಭರವಸೆ ಈಡೇರಿಸಿದ್ದಾರಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ನಿರ್ಬಂಧ ತೆರವು: ದೂದ್ ಸಾಗರ್ ಜಲಪಾತ ವೀಕ್ಷಣೆಗೆ ಅವಕಾಶ!

ಕಳೆದ 5 ವರ್ಷಗಳ ಹಿಂದೆ ಆಡಳಿತಕ್ಕೆ ಬಂದ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಜನರಿಗೆ ಎಲ್ಲ ಬಗೆಯ ಸೌಲಭ್ಯಗಳನ್ನು ಕಲ್ಪಿಸಿ ಪೂರ್ಣ ಪ್ರಮಾಣದಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೊಡುತ್ತೇವೆಂದು ಹೇಳಿದ್ದರು ಈಗ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

RELATED ARTICLES

Related Articles

TRENDING ARTICLES