Friday, November 22, 2024

ವಿದ್ಯುತ್ ಬೇಡಿಕೆ ಹೆಚ್ಚಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಳೆ ಕಡಿಮೆಯಾಗುವುದರಿಂದ ಹಾಗೂ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 900 ಮೆ.ವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ 1500 ರಿಂದ 1600 ಮೆ.ವ್ಯಾಟ್ ಬೇಡಿಕೆ ಇರುವುದರಿಂದ ತೊಂದರೆಯಾಗಿದೆ. ವಿದ್ಯುತ್ ನ್ನು ಹೊರಗಿನಿಂದ ಹೇಗೆ ಖರೀದಿಸುವುದು ಎಂದು ಚರ್ಚಿಸಲು ಇಂದು ಮಧ್ಯಾಹ್ನ ಸಭೆ ಕರೆಯಲಾಗಿದೆ ಎಂದರು.

ಇದನ್ನೂ ಓದಿ: ಚನ್ನಮ್ಮ, ಟಿಪ್ಪು ಸುಲ್ತಾನ್ ಸ್ವಾಭಿಮಾನಿ ಹೋರಾಟದ ಸ್ಫೂರ್ತಿ: ಸಿಎಂ ಸಿದ್ದರಾಮಯ್ಯ

ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆಲ್ಲಿಯೂ ಮಾರಬಾರದೆಂದು ನಿನ್ನೆ ಅದೇಶವನ್ನೂ ಮಾಡಲಾಗಿದೆ ಎಂದು ತಿಳಿಸಿದರು.

ಬಿಜೆಪಿಗೆ ವಸ್ತುಸ್ಥಿತಿ ತಿಳಿದಿಲ್ಲ:

ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿಯವರು ಹೇಳಿದ್ದಕ್ಕೆಲ್ಲಾ ಉತ್ತರ ನೀಡಲು ಆಗುವುದಿಲ್ಲ. ಅವರು ರಾಜಕೀಯವಾಗಿ ಮಾತನಾಡುತ್ತಾರೆ. ವಸ್ತುಸ್ಥಿತಿ ಅವರಿಗೆ ತಿಳಿದಿದೆಯೇ. ಮಳೆ ಇಲ್ಲದೆ ಬರಗಾಲ ಬಂದು ತೊಂದರೆಯಾಗಿದೆ. ಆದರೂ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.ಅವರು ಹೇಳಿದಂತೆ ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ. ಮೂರು ಫೇಸ್ ನಲ್ಲಿ 7 ಗಂಟೆ ವಿದ್ಯುತ್ ನೀಡಬೇಕೆಂದಿರುವುದನ್ನು ಕೊಡಲು ಆಗುತ್ತಿಲ್ಲ ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

RELATED ARTICLES

Related Articles

TRENDING ARTICLES