Monday, December 23, 2024

ನಿರ್ಬಂಧ ತೆರವು: ದೂದ್ ಸಾಗರ್ ಜಲಪಾತ ವೀಕ್ಷಣೆಗೆ ಅವಕಾಶ!

ಗೋವಾ: ಜಗತ್ಪಸಿದ್ಧ ದೂದ್ ಸಾಗರ್ ಜಲಪಾತವು ರಾಜ್ಯದಲ್ಲಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಜಲಪಾತಗಳಲ್ಲಿ ಒಂದಾಗಿದೆ. ಈ ಜಲಪಾತ ವೀಕ್ಷಣೆಗೆ ಮಳೆಗಾಲದಲ್ಲಿ ಹೇರಿದ್ದ ನಿರ್ಬಂಧ ತೆರವುಗೊಳಿಸಲಾಗಿದ್ದು, ಪ್ರವಾಸಿಗರು ದೂದ್ ಸಾಗರ ಜಲಪಾತ ವೀಕ್ಷಣೆಗೆ ಅವಕಾಶ ಲಭಿಸಿದಂತಾಗಿದೆ.

ಮಳೆಗಾಲದ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಗೋವಾ ಜಿಲ್ಲಾಧಿಕಾರಿಗಳು ದೂಧ್ ಸಾಗರ ಜಲಪಾತ ವೀಕ್ಷಣೆಗೆ ಪ್ರವಾಸಿಗರು ಭೇಟಿ ನೀಡುವುದನ್ನು ನಿಷೇಧಿಸಿದ್ದರು. ಪ್ರವಾಸಿಗರಿಗೆ ಮಾಹಿತಿ ನೀಡಲು ಸುತ್ತೋಲೆ ಹೊರಡಿಸಲಾಗಿತ್ತು. ಕೆಲ ತಿಂಗಳ ನಿರ್ಬಂಧದ ನಂತರ ಇದೀಗ ದೂಧಸಾಗರ ಪ್ರವಾಸೋದ್ಯಮ ಪುನರಾರಂಭಗೊಂಡಿದೆ. ಮಳೆಗಾಲದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತಗಳಿಗೆ ಭೇಟಿ ನೀಡುತ್ತಾರೆ.

ಇದನ್ನೂ ಓದಿ: ಆರ್.ಟಿ ನಗರದಲ್ಲಿ ಐಟಿ ರೇಡ್​: ಬಾಕ್ಸ್​ಗಳಲ್ಲಿ ಇಟ್ಟಿದ್ದ ಕಂತೆ ಕಂತೆ ಹಣ ಪತ್ತೆ!

ಈ ವರ್ಷ ಗೋವಾದಲ್ಲಿ ವಿವಿಧ ಜಲಪಾತಗಳಲ್ಲಿ ಸಂಭವಿಸಿದ ವಿವಿಧ ಅಪಘಾತಗಳಲ್ಲಿ ಹಲವಾರು ಪ್ರವಾಸಿಗರು ಮತ್ತು ಸ್ಥಳೀಯರು ಪ್ರಾಣ ಕಳೆದುಕೊಂಡ ನಂತರ ರಾಜ್ಯದ ಅರಣ್ಯ ಪ್ರದೇಶದಲ್ಲಿನ ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿತ್ತು. ಜಗತ್ಪಸಿದ್ಧ ದೂಧಸಾಗರ ಜಲಪಾತ ಕೂಡ ಪ್ರವಾಸಿಗರಿಗೆ ಬಂದ್ ಆಗಿತ್ತು. ಮೂರು ತಿಂಗಳ ಕಾಯುವಿಕೆಯ ನಂತರ ಇದೀಗ ದೂದ್ ಸಾಗರ್ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ.

RELATED ARTICLES

Related Articles

TRENDING ARTICLES