Thursday, September 19, 2024

KIADB ಹಂಚಿಕೆಯಿಂದ 4,248 ಕೋಟಿ ರೂ. ಬಾಕಿ: ಸಚಿವ ಎಂ.ಬಿ ಪಾಟೀಲ್​!

ಬೆಂಗಳೂರು: ಉದ್ಯಮ ಸ್ಥಾಪನೆಯ ಉದ್ದೇಶಕ್ಕೆಂದು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿ ಇದುವರೆಗೆ ಹಂಚಿರುವ ನಿವೇಶನಗಳಿಂದ 4,248 ಕೋಟಿ ರೂ.ಗಳಷ್ಟು ಬೃಹತ್ ಬಾಕಿ ಹಣ ಬರಬೇಕಿದೆ. ಇದನ್ನು ಮುಂದಿನ ನಾಲ್ಕು ತಿಂಗಳಲ್ಲಿ ಕಟ್ಟುನಿಟ್ಟಾಗಿ ವಸೂಲಿ ಮಾಡಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ ಗಡುವು ವಿಧಿಸಿದ್ದಾರೆ.

ಖನಿಜ‌ ಭವನದಲ್ಲಿ KIADB ಪ್ರಗತಿ ಪರಿಶೀಲನಾ ಸಭೆ ನಡೆಸಿದ ಎಂ.ಬಿ.ಪಾಟೀಲ್ ಅಧಿಕಾರಿಗಳಿಗೆ ಈ ಎಚ್ಚರಿಕೆ ನೀಡಿದ್ದಾರೆ. ಇದರಲ್ಲಿ ವಿಫಲರಾದರೆ ಮಂಡಳಿಯ ಕಾರ್ಯದರ್ಶಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಸರಾಗೆ ಹೆಚ್ಚುವರಿ ಬಸ್​ಗಳ ನಿಯೋಜನೆ!

KIADB ಆರಂಭವಾದಾಗಿನಿಂದಲೂ ಈ ಸಮಸ್ಯೆ ಇದೆ. ಈಗಿನ ಅಂಕಿಅಂಶಗಳ ಪ್ರಕಾರ, ಮಂಡಳಿಯು ಸಾಮಾನ್ಯ ವರ್ಗದವರಿಗೆ ಮಂಜೂರು ಮಾಡಿರುವ 5,932 ಕೈಗಾರಿಕಾ ಘಟಕಗಳಿಂದ 2,825 ಕೋಟಿ ರೂ. ಬರಬೇಕಾಗಿದೆ. SC-ST ವರ್ಗಗಳ ಅಡಿಯಲ್ಲಿ 741 ಕೋಟಿ ರೂ. ಬಾಕಿ ಉಳಿದಿದೆ. ಇದರ ಜತೆಗೆ SC-ST ವರ್ಗಗಳಿಗೆ ನೀಡುವ ಸಬ್ಸಿಡಿ ಬಾಬ್ತಿನಲ್ಲಿ 680 ಕೋಟಿ ಇದೆ ಎಂದು ಸಚಿವರು ವಿವರಿಸಿದರು.

RELATED ARTICLES

Related Articles

TRENDING ARTICLES