Wednesday, December 25, 2024

ವ್ಯಕ್ತಿ ಮುಖ್ಯ ಅಲ್ಲ ಅಂತಾರೆ, ಪ್ರಧಾನಿ ಮೋದಿ ವ್ಯಕ್ತಿಯಲ್ಲವಾ?: ರೇಣುಕಾಚಾರ್ಯ ಕಿಡಿ

ದಾವಣಗೆರೆ : ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲದವರು ಗುಂಪು ಕಟ್ಟಿಕೊಂಡಿದ್ದಾರೆ ಎಂದು ಬಿಜೆಪಿ ರಾಷ್ಟ್ರಿಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಅವನತಿಯತ್ತ ಸಾಗಿದೆ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ. ವ್ಯಕ್ತಿಗಿಂತ ಪಕ್ಷ ಮುಖ್ಯ ಅಂತ ಕೆಲ ಮುಖಂಡರು ಹೇಳುತ್ತಾರೆ. ಹೀಗೆ ಹೇಳುವ ವ್ಯಕ್ತಿ ಬಿಜೆಪಿ ರಾಜ್ಯಾಧ್ಯಕ್ಷ ಸೇರಿ ಬಹುತೇಕ ಜನರನ್ನ ಸೇರಿಸಿಕೊಂಡು ತಮ್ಮದೇ ಗುಂಪು ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿ.ಎಸ್ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಿದ್ರು, ಪಕ್ಷ ಸಹ ಮುಗಿಸಿದ್ರು. ಬಿಜೆಪಿಗೆ ನಾಯಕತ್ವ ಇಲ್ಲ. ಇದೇ ಕಾರಣಕ್ಕೆ ಬಿಜೆಪಿ ನಾಯಕರು ಬೇರೆ ಪಕ್ಷದ ಕಡೆ ಮುಖ ಮಾಡಿದ್ದಾರೆ. ವ್ಯಕ್ತಿ ಮುಖ್ಯ ಅಲ್ಲ ಅಂತಾರೆ.. ಪ್ರಧಾನಿ ನರೇಂದ್ರ ಮೋದಿ ವ್ಯಕ್ತಿಯಲ್ಲವಾ? ಹೇಗೆ ಮೋದಿ ರಾಷ್ಟ್ರ ಮಟ್ಟದಲ್ಲಿ ಮೂಖ್ಯವೋ, ರಾಜ್ಯ ಮಟ್ಟದಲ್ಲಿ ಯಡಿಯೂರಪ್ಪ ಸಹ ಮುಖ್ಯ. ಬಿಜೆಪಿಯನ್ನು ಯಡಿಯೂರಪ್ಪ ಕೈಗೆ ಕೊಡಲಿ ನೋಡೋಣ ಎಂದು ಗುಡುಗಿದ್ದಾರೆ.

ಬಿಜೆಪಿಯನ್ನು ಕಟ್ಟಿದ್ದು ಯಡಿಯೂರಪ್ಪ

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆದ್ರೆ ಒಂದು ಹೊಸ ತಂಡ ಬರುತ್ತದೆ. ವ್ಯಕ್ತಿಗಿಂತ ಪಕ್ಷ ಮುಖ್ಯ ಎನ್ನುವರು ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದೇವೆ ಅಂತ ಹೇಳಲಿ. ಅದು ಸಾಧ್ಯವಿಲ್ಲ, ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿದ್ದು ಯಡಿಯೂರಪ್ಪ. ಗೆದ್ದಲು ಕಟ್ಟಿದ ಹುತ್ತಕ್ಕೆ ಹಾವುಗಳು ಸೇರಿಕೊಳ್ಳುವಂತಾಗಿದೆ ಎಂದು ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದಾರೆ.

RELATED ARTICLES

Related Articles

TRENDING ARTICLES