Monday, December 23, 2024

ಕಾಂಗ್ರೆಸ್ ಕಮಿಷನ್ ಲಾಬಿಗಳು ಬಹಿರಂಗವಾಗಿವೆ : ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಕಮಿಷನ್​​ ಲಾಬಿಗಳು ಬಹಿರಂಗವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಕಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರು ಬಿಲ್​ಗಾಗಿ ರಾಜ್ಯಪಾಲರಿಗೆ ದೂರು ನೀಡಿದ್ದರು. ಆಗ ಬಿಲ್ ಹಣ ಕೊಡದೇ ಕಮಿಷನ್ ಕುದುರಿಸುವ ಕೆಲಸ ಆಗುತ್ತಿತ್ತು. ಈಗ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನ ಮನೆಯಲ್ಲಿ ಅಪಾರ ಹಣ ಸಿಕ್ಕಿದೆ. ಈವರೆಗೂ ಗುತ್ತಿಗೆದಾರರ ಮನೆಯಲ್ಲಿ ಇಷ್ಟು ದೊಡ್ಡ ಹಣ ಸಿಕ್ಕಿರಲಿಲ್ಲ ಎಂದು ಹೇಳಿದ್ದಾರೆ.

ಬರೋಬ್ಬರಿ 42 ಕೋಟಿ ರೂಪಾಯಿ ಸಿಕ್ಕಿದ್ದಕ್ಕೂ ಗುತ್ತಿಗೆದಾರರ ಹಣ ಬಿಡುಗಡೆ ಆಗಿದ್ದಕ್ಕೂ ಲೆಕ್ಕ ಸರಿ ಇದೆ. ಸಿಕ್ಕಿಬಿದ್ದವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಕಾಂಟ್ರಾಕ್ಟರ್. ಇಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಅಧ್ಯಕ್ಷರು ಬಹಳ ಆತ್ಮೀಯರು. ಯಾರು ಕಮಿಷನ್ ಕೊಟ್ಟಿದ್ದಾರೋ ಅವರಿಗೆ ಹಣ ಕೊಟ್ಟಿದ್ದಾರೆ. ಬಡಪಾಯಿಗಳಿಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ವಿಪಕ್ಷ ಬಿಜೆಪಿಗೆ ಅಸ್ತ್ರವಾದ ಐಟಿ ದಾಳಿ

ಬೆಂಗಳೂರಿನಲ್ಲಿ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಅಶ್ವತ್ತಮ್ಮ ಪತಿ ಅಂಬಿಕಾಪತಿ ಹಾಗೂ ಸಹೋದರ ಪ್ರದೀಪ್ ಮನೆ ಮೇಲೆ ನಡೆದ ಐಟಿ ದಾಳಿ ರಾಜಕೀಯ ತಿರುವು ಪಡೆದುಕೊಂಡಿದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ವಿಪಕ್ಷ ಬಿಜೆಪಿಗೆ ಅಸ್ತ್ರವಾಗಿ ಪರಿಣಮಿಸಿದೆ. ಅಲ್ಲದೆ, ಈ ಹಿಂದೆ ಕಾಂಗ್ರೆಸ್, ಸರ್ಕಾರದ ವಿರುದ್ಧ ಮಾಡುತ್ತಿದ್ದ ಕಮಿಷನ್ ಆರೋಪವನ್ನು ಮುಂದುವರಿಸಿದೆ.

RELATED ARTICLES

Related Articles

TRENDING ARTICLES