Wednesday, January 22, 2025

ವಿದ್ಯಾರ್ಥಿ ಉಸಿರು ಕಸಿದ ಕಿಲ್ಲರ್ BMTC

ಬೆಂಗಳೂರು : ಬಿಎಂಟಿಸಿ ಬಸ್​ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಯಶವಂತಪುರ ಗಾರೆಪ್ಪನ ಪಾಳ್ಯ ರಸ್ತೆಯಲ್ಲಿ ನಡೆದಿದೆ.

ಗಂಗಾಧರ್ (21) ಮೃತ ದುರ್ದೈವಿ. ಹೆಚ್​ಎಎಲ್​ಗೆ ಇಂಟರ್ನಿಶಿಫ್ ಸರ್ಟಿಫಿಕೇಟ್ ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗಂಗಾಧರ್​ಗೆ ಹೂವಿನ ಮಾರ್ಕೆಟ್ ಸಮೀಪ ಹಿಂಬಂದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂಬದಿ ಚಕ್ರ ಹರಿದು ಗಂಗಾಧರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಯಶವಂತಪುರ ಸಂಚಾರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಅಪಘಾತ ಎಸಗಿದ್ದ ಬಿಎಂಟಿಸಿ ಬಸ್ ಚಾಲಕನಿಗೆ ಠಾಣೆಗೆ ಬರುವಂತೆ ಸೂಚನೆ ನೀಡಿದ್ದಾರೆ. ಅಲ್ಲದೆ, ವಿದ್ಯಾರ್ಥಿ ಮೃತದೇಹ ಮರಣೋತ್ತರ ಪರೀಕ್ಷೆಗೆ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.

ಗುಜರಿ ಅಂಗಡಿ ಧಗಧಗ

ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿಅವಘಡ ಸಂಭವಿಸಿದೆ. ಲಗ್ಗೆರೆಯಲ್ಲಿ ಆಸರೆ ವೃದ್ಧಾಶ್ರಮ ಬಳಿಯೇ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಬೆಂಕಿ ಹೊತ್ತುಕೊಂಡಿದೆ. ಟ್ರಾನ್ಸ್‌ಫಾರ್ಮರ್ ಸ್ಫೋಟದಿಂದ ಗುಜರಿ ಅಂಗಡಿ ಧಗಧಗನೆ ಹೊತ್ತಿ ಉರಿದಿದೆ. ಸುತ್ತಲೂ ದಟ್ಟ ಹೊಗೆ ಅವರಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES