Wednesday, January 22, 2025

WorldCup- 2023: ಇಂದು ಭಾರತ V/S ಪಾಕಿಸ್ತಾನ ಮುಖಾಮುಖಿ!

ಅಹ್ಮದಾಬಾದ್​ : ಐಸಿಸಿ ಏಕದಿನ ವಿಶ್ವಕಪ್ 2023 ರ 11ನೇ ಪಂದ್ಯದಲ್ಲಿ ಇಂದು ಕ್ರಿಕೆಟ್ ಲೋಕದ ಬದ್ಧವೈರಿಗಳಾದ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿದೆ.

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಉಭಯ ತಂಡಗಳು ಆಡಿದ ಮೊದಲ ಎರಡೂ ಪಂದ್ಯಗಳನ್ನು ಗೆದ್ದು ಬೀಗಿರುವ ಕಾರಣ ಇಂದಿನ ಮ್ಯಾಚ್ ಸಾಕಷ್ಟು ಕುತೂಹಲ ಕೆರಳಿಸಿದೆ. ವಿಶ್ವದ ಅತಿ ದೊಡ್ಡ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದ ಟಿಕೆಟ್ ಕೂಡ ಸಂಪೂರ್ಣ ಸೋಲ್ಡ್ ಔಟ್ ಆಗಿದೆ.

ಇದನ್ನೂ ಓದಿ: ಆನೇಕಲ್ ತಹಶೀಲ್ದಾರ್ ಶಿವಪ್ಪ ಲಮಾಣಿ ಅಮಾನತು

ಇಂದಿನ ಪಂದ್ಯದಲ್ಲಿ ಶುಭ್​ಮನ್ ಗಿಲ್ ಆಡುವುದು ಬಹುತೇಕ ಖಚಿತವಾಗಿದೆ. ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮಾ ಅವರು ಗಿಲ್ ಶೇ. 99 ರಷ್ಟು ಆಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES