Sunday, December 22, 2024

ಲೋಕಾಯುಕ್ತ ಬಲೆಗೆ ಬಿದ್ದ ನಾಲ್ವರು ಅಬಕಾರಿ ಇಲಾಖೆ ಅಧಿಕಾರಿಗಳು!

ದಾವಣಗೆರೆ: ಅಬಕಾರಿ ಇಲಾಖೆಯಲ್ಲಿ ಮದ್ಯದ ಅಂಗಡಿ ಆರಂಭಕ್ಕೆ ಪರವಾನಗಿ ಕೊಡಲು ಲಂಚ ಪಡೆಯುತ್ತಿರುವಾಗ ಅಬಕಾರಿ ಡಿ.ಸಿ, ಸೇರಿದಂತೆ ನಾಲ್ವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಜಿಲ್ಲಾ ಅಬಕಾರಿ ಡಿ.ಸಿ ಸ್ವಪ್ನ, ಪ್ರಥಮ ದರ್ಜೆ ಸಹಾಯಕ ಅಶೋಕ ಎಚ್.ಎಂ., ಹರಿಹರ ಅಬಕಾರಿ ವಲಯ ಕಚೇರಿಯ ಅಬಕಾರಿ ನಿರೀಕ್ಷಕಿ ಶೀಲಾ, ದ್ವಿತೀಯ ದರ್ಜೆ ಸಹಾಯಕಿ ಶೈಲಶ್ರೀ ಬಂಧಿತರು. ಹರಿಹರದ ಅಮರಾವತಿ ಬಳಿ ಮದ್ಯದ ಅಂಗಡಿ ಆರಂಭಿಸಲು ಡಿ.ಜಿ. ರಘುನಾಥ ಎಂಬುವರು ಅರ್ಜಿ ಸಲ್ಲಿಸಿದ್ದರು.  ಅವರಿಂದ ಆರೋಪಿಗಳು 7 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ನಗರದ ದೇವರಾಜ ಅರಸು ಬಡಾವಣೆಯಲ್ಲಿ ಇರುವ ಅಬಕಾರಿ ಇಲಾಖೆ ಕಚೇರಿಯಲ್ಲಿ ಆರೋಪಿ ಅಶೋಕ ಎಚ್.ಎಂ. ಲಂಚ ಪಡೆಯುತ್ತಿರುವಾಗ ಲೋಕಾಯುಕ್ತ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

RELATED ARTICLES

Related Articles

TRENDING ARTICLES