Tuesday, May 21, 2024

ಅ.16 ರಿಂದ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯಿಂದ ಅ.16 ರಿಂದ 4 ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅ. 16 ರಿಂದ 19ರವರೆಗೆ ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಅಕ್ಟೋಬರ್‌ 17 ರಂದು ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಯೆಲ್ಲೊಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: ಬಿಲ್ಡರ್​ ಮನೆಯ ಮೇಲೆ ಐಟಿ ದಾಳಿ: 45 ಕೋಟಿ ಹಣ ಪತ್ತೆ!

ಅಕ್ಟೋಬರ್‌ 16 ರಿಂದ 4 ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

RELATED ARTICLES

Related Articles

TRENDING ARTICLES