Sunday, December 22, 2024

ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಚಾಲನೆ!

ಮೈಸೂರು: ಐತಿಹಾಸಿಕ 416ನೇ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕ್ರತಿಕ ನಗರಿ ಮೈಸೂರು ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇಂದು ನಾಡಹಬ್ಬಕ್ಕೆ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಲಿದ್ದಾರೆ.

ಇದಕ್ಕಾಗಿ ಚಾಮುಂಡಿ ಬೆಟ್ಟ, ಅರಮನೆ ಅಂಗಳದಲ್ಲಿ ಬೃಹತ್ ವೇದಿಕೆಗಳು ನಿರ್ಮಾಣವಾಗಿವೆ. ದಸರೆಗಾಗಿ ಸಿಎಂ ಸಿದ್ದರಾಮಯ್ಯ 3 ದಿನಗಳ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ10:15ಕ್ಕೆ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ದಸರಾ ಉದ್ಘಾಟಿಸಲಾಗುತ್ತಿದ್ದು, ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ದಸರಾವನ್ನು ಉದ್ಘಾಟನೆ ಮಾಡಲಿದ್ದಾರೆ.

ಇದನ್ನೂ ಓದಿ: ನಾವೇ ನಂ.1 : ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಭಾರತ

ಬೆಳಗ್ಗೆ 10:15 ರಿಂದ 10:36ಕ್ಕೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ನಡೆಯಲಿದೆ. ಸಂಜೆ 6:30 ರಿಂದ 7:15ರ ಶುಭಮೇಷ ಲಗ್ನದಲ್ಲಿ ಅರಮನೆಯಲ್ಲಿ ಪೂಜೆಗಳು ಆರಂಭವಾಗಲಿವೆ.

RELATED ARTICLES

Related Articles

TRENDING ARTICLES