Monday, February 24, 2025

ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು : ಕಟೀಲ್

ಬೆಂಗಳೂರು : ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್​​ ಪಕ್ಷಕ್ಕೂ ಸಂಬಂಧವಿದೆ. ಈ ಹಿನ್ನಲೆ ಸರ್ಕಾರದ ವಿರುದ್ಧ ನಾಳೆ ಮತ್ತು ನಾಡಿದ್ದು ಪ್ರತಿಭಟನೆ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ ಕುಮಾರ್​ ಕಟೀಲ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಲೂಟಿ ಸರ್ಕಾರ ಜಾರಿಯಲ್ಲಿದೆ. ನೈತಿಕ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ರಾಜೀನಾಮೆ ಕೊಡಬೇಕು ಆಗ್ರಹಿಸಿದರು.

ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳಿಗೆ ರೇಟ್ ಫಿಕ್ಸ್​​ ಮಾಡಿದ್ದಾರೆ. ಕಲಾವಿದರಿಂದಲೂ ಕಮಿಷನ್ ಕೇಳುತ್ತಿದ್ದಾರೆ, ಇದು ಎಟಿಎಂ ಸರ್ಕಾರವಾಗಿದೆ. ಸರ್ಕಾರದ ಗುತ್ತಿಗೆದಾರರಿಗೆ 650 ಕೋಟಿ ರೂ. ಬಿಡುಗಡೆ ಮಾಡಿದೆ. ಬಿಲ್ ಪಾವತಿ ಬಳಿಕ ಐಟಿ ದಾಳಿಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ ಎಂದು ವಾಗ್ದಾಳಿ ನಡೆಸಿದರು.

ನಾಳೆ‌ BJPಯಿಂದ ರಾಜ್ಯಾದ್ಯಂತ ಪ್ರತಿಭಟನೆ

ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ‌ ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ನಿರ್ಧಾರ‌ ಮಾಡಲಾಗಿದೆ. ಈ ಹಿನ್ನಲೆ ಇಂದು ಬಿಜೆಪಿ ಕಚೇರಿಯಲ್ಲಿ‌ ನಳಿನ್​ ಕುಮಾರ್​ ಕಟೀಲ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ವೇಳೆ ನಾಳಿನ ‌ಪ್ರತಿಭಟನೆಯ ರೂಪರೇಷೆ ಹಾಗೂ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚೆ ಮಾಡಲಾಗಿದೆ.

RELATED ARTICLES

Related Articles

TRENDING ARTICLES