Tuesday, December 31, 2024

ನಾಳೆ ಐತಿಹಾಸಿಕ ಶ್ರೀರಂಗಪಟ್ಟಣ ದಸರಾಗೆ ಚಾಲನೆ

ಮಂಡ್ಯ : ನಾಳೆ ಐತಿಹಾಸಿಕ ಶ್ರೀರಂಗಪಟ್ಟಣ ದಸರಾಗೆ ಚಾಲನೆ ಸಿಗಲಿದ್ದು, ಅಕ್ಟೋಬರ್ 19 ರವರೆಗೆ ನಡೆಯಲಿದೆ. ಮೈಸೂರಿನ ರಾಜವಂಶಸ್ಥೆ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.

ಶ್ರೀರಂಗಪಟ್ಟಣದ ಹೊರ ವಲಯದಲ್ಲಿರುವ ಕಿರಂಗೂರು ಬನ್ನಿಮಂಟಪದ ಬಳಿ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಜಂಬೂ ಸವಾರಿ ಮೆರವಣಿಗೆ‌‌‌ ಬನ್ನಿಮಂಟಪದಿಂದ ಶ್ರೀರಂಗಪಟ್ಟಣದ ರಂಗನಾಥ ದೇಗುಲದವರೆಗೂ ನಡೆಯಲಿದೆ. ದಸರಾ ಮಹೋತ್ಸವ ಅಂಗವಾಗಿ ರಂಗನಾಥ ದೇಗುಲದ ಆವರಣದಲ್ಲಿ ಮೂರು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಏರ್ಪಡಿಸಲಾಗಿದೆ.

ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ವಿಶಾಲ ವೇದಿಕೆ ಸಿದ್ದಗೊಳ್ಳುತ್ತಿದೆ. ಶ್ರೀರಂಗಪಟ್ಟಣದ ಮುಖ್ಯ ಬೀದಿಗಳಲ್ಲಿ ವಿದ್ಯುತ್ ದೀಪಾಲಂಕಾರದೊಂದಿಗೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿವವೆ. ನಾಳೆ ಮಧ್ಯಾಹ್ನ 2.30ಕ್ಕೆ ಶುಭ ಲಗ್ನದಲ್ಲಿ ಶ್ರೀರಂಗಪಟ್ಟಣ ದಸರಾಗೆ ಉದ್ಘಾಟನೆ ಸಿಗಲಿದೆ. ದಸರಾ ಉದ್ಘಾಟನೆಯಲ್ಲಿ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಸಂಸದೆ ಸುಮಲತಾ ಅಂಬರೀಶ್, ಶಾಸಕ ರಮೇಶ್ ಬಾಬು, ಬಂಡಿಸಿದ್ದೇಗೌಡ ಸೇರಿ ಅಧಿಕಾರಿಗಳೆಲ್ಲಾ ಪಾಲ್ಗೊಳ್ಳಲಿದ್ದಾರೆ.

RELATED ARTICLES

Related Articles

TRENDING ARTICLES