Monday, November 18, 2024

128 ವರ್ಷಗಳ ನಂತರ ಒಲಿಂಪಿಕ್ಸ್​ಗೆ ಕ್ರಿಕೆಟ್ : ಕ್ರಿಕೆಟ್ ಕಾದಾಟಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು : 2028ರ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಕ್ರಿಕೆಟ್​ ಅನ್ನು ಸೇರ್ಪಡೆಗೊಳಿಸಲಾಗಿದೆ. ಸೋಮವಾರ ನಡೆದ ಅಂತರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ ಸಭೆಯಲ್ಲಿ ಈ ಮಹ್ವದ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಅದರಂತೆ ಲಾಸ್ ಏಂಜಲೀಸ್​ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಪಂದ್ಯಾಟಗಳು ಇರಲಿದೆ.

ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಕಾರ್ಯನಿರ್ವಾಹಕ ಮಂಡಳಿಯು ಕಳೆದ ವಾರ ಲಾಸ್ ಏಂಜಲೀಸ್ ಕ್ರೀಡಾಕೂಟದ ಸಂಘಟಕರ ಪ್ರಸ್ತಾವನೆಗೆ ಕ್ರಿಕೆಟ್ ಅನ್ನು ಸೇರಿಸಲು ಅನುಮೋದನೆ ನೀಡಿತ್ತು. ಇದೀಗ ಅಧಿಕೃತವಾಗಿ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಸೇರ್ಪಡೆಯಾಗಿದೆ. 2028ರಲ್ಲಿ ಲಾಸ್ ಏಂಜಲೀಸ್​ನಲ್ಲಿ ನಡೆಯಲಿರುವ ಒಲಿಂಪಿಕ್ಸ್​ನಲ್ಲಿ ಟಿ-20 ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದೆ. ಹೀಗಾಗಿ, ಬಹು ದೇಶಗಳ ನಡುವಣ ರಣರೋಚಕ ಕಾದಾಟವನ್ನು ನಿರೀಕ್ಷಿಸಬಹುದು.

1900ರಲ್ಲಿ ನಡೆದ ಬೇಸಿಗೆ ಒಲಿಂಪಿಕ್ಸ್‌ನಲ್ಲಿ ಒಮ್ಮೆ ಕ್ರಿಕೆಟ್ ಆಡಲಾಗಿತ್ತು. 128 ವರ್ಷಗಳ ಹಿಂದೆ ನಡೆದ ಈ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ಮತ್ತು ಫ್ರಾನ್ಸ್ ನಡುವೆ ಏಕೈಕ ಪಂದ್ಯವನ್ನು ಆಡಲಾಗಿತ್ತು. ಈ ಪಂದ್ಯದಲ್ಲಿ ಫ್ರಾನ್ಸ್ ತಂಡವನ್ನು 185 ರನ್‌ಗಳಿಂದ ಸೋಲಿಸಿದ ಗ್ರೇಟ್ ಬ್ರಿಟನ್ ಚಿನ್ನದ ಪದಕ ಗೆದ್ದುಕೊಂಡಿತ್ತು. ಇದೀಗ 128 ವರ್ಷಗಳ ಬಳಿಕ ಮತ್ತೊಮ್ಮೆ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಕಾದಾಟಕ್ಕೆ ಅವಕಾಶ ದೊರೆಯುತ್ತಿದೆ.

RELATED ARTICLES

Related Articles

TRENDING ARTICLES