Thursday, December 26, 2024

ಕಾಂಗ್ರೆಸ್ಸಿಗರ ಯೋಗ್ಯತೆ ಅಧಿಕಾರಿಗಳಿಗೆ ಗೊತ್ತಾಗಿದೆ : ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

ಚಿತ್ರದುರ್ಗ : ಐಟಿ ದಾಳಿ ವೇಳೆ ಗುತ್ತಿಗೆದಾರರ ಮನೆಯಲ್ಲಿ ಸಿಕ್ಕಿರುವ ಹಣ ಬಿಜೆಪಿಗೆ ಸೇರಿದ್ದು ಎಂಬುದು ಹಾಸ್ಯಾಸ್ಪದ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಕುಟುಕಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಫಂಡಿಂಗ್ ಮಾಡುತ್ತಿರುವುದು ಜಗಜ್ಜಾಹಿರಾಗಿದೆ. ಸರ್ಕಾರ ದಿವಾಳಿ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ನಿಮ್ಮ ಯೋಗ್ಯತೆ ಅಧಿಕಾರಿಗಳಿಗೆ ಗೊತ್ತಾಗಿದೆ. ಭ್ರಷ್ಟ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಕಿಡಿಕಾರಿದರು.

ಚುನಾವಣೆಗಾಗಿ ಗುತ್ತಿಗೆದಾರರ ಬಳಿ ಹಣ ಸಂಗ್ರಹ ನಡೆದಿದೆ. ಕಾಂಗ್ರೆಸ್ ಹೈಕಮಾಂಡ್​ಗೆ ಹಣ ನೀಡಲು ಪೈಪೋಟಿ. ಇಬ್ಬರ ಪೈಪೋಟಿ ನಡುವೆ ಹಣದ ವಿಷಯ ಬಯಲಾಗಿರಬಹುದು. ಭದ್ರಾ ಯೋಜನೆಗೆ 1.950 ಕೋಟಿ ಬಾಕಿ ಉಳಿಸಿಕೊಳ್ಳಲಾಗಿದೆ. ಕಮಿಷನ್ ಬಂದ ಬಳಿಕ ಹಣ ಬಿಡುಗಡೆಗೆ ಸೂಚಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಸ್ಥಗಿತಗೊಂಡಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪ ಮಾಡಿದರು.

ಡಿಸಿ ಎದುರಲ್ಲೇ ಅಧಿಕಾರಿಗಳು ಹೇಳಿದ್ದಾರೆ

ದಾವಣಗೆರೆ, ಚಿತ್ರದುರ್ಗ, ತುಮಕೂರು ನೇರ ರೈಲು ಮಾರ್ಗ ಭೂಸ್ವಾಧೀನಕ್ಕೆ ಹಣ ಬಿಡುಗಡೆ ಮಾಡಿಲ್ಲ. ಯಾರು ಕಲೆಕ್ಷನ್​ಗೆ ಕರೆ ಮಾಡುತ್ತಾರೆ ಎಂದು ಜಿಲ್ಲೆಗೆ ಗೊತ್ತಿದೆ. ಕಮಿಷನ್ ಬೇಕು ಎಂದು ಕರೆ ಮಾಡುತ್ತಾರೆಂದು ಅಧಿಕಾರಗಳೇ ಹೇಳುತ್ತಾರೆ. ನಿಮ್ಮ ಕಾಲದಲ್ಲಿ ಭದ್ರಾ ಯೋಜನೆ ಆಗದಿದ್ದರೆ ಜಿಲ್ಲೆಗೆ ಯೋಜನೆಯೇ ಬರಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಡಿಸಿ ಎದುರಲ್ಲೇ ಅಧಿಕಾರಿಗಳು ಹೇಳಿದ್ದಾರೆ ಎಂದು ನಾರಾಯಣಸ್ವಾಮಿ ಹರಿಹಾಯ್ದರು.

RELATED ARTICLES

Related Articles

TRENDING ARTICLES