ಬೆಂಗಳೂರು : ಪ್ರಧಾನಿ ಮೋದಿ, ಅಮಿಶ್ ಶಾ ಬಗ್ಗೆ ವೈಯಕ್ತಿಕ ದ್ವೇಷ ಇಲ್ಲ. ಸಿದ್ದಾಂತ, ತತ್ವ ಬೇರೆ ಇದೆ. ಅದಕ್ಕೆ ನಾವು ವಿರೋಧಿಸುತ್ತೇವೆ. ಎನ್ಡಿಎ ಸೋಲಿಸಬೇಕಿದೆ. ನಾವು ಕಾಂಗ್ರೆಸ್ ಬೆಂಬಲ ನೀಡುತ್ತೇವೆ. ಜೆಡಿಎಸ್ ಒರಿಜಿನಲ್ ನಮ್ಮದೆ. ನಾನು ಅದರ ಅಧ್ಯಕ್ಷ, ನನ್ನ ತೆಗೆಯಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿದರು.
ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ವರಿಷ್ಠರ ನಡೆಗೆ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸಭೆ ನಡೆಸಿ ಮಾತನಾಡಿದ್ದು, 1995ರಲ್ಲಿ ಜೆಡಿಎಸ್ ಅಧ್ಯಕ್ಷನಾಗಿ 16 ಲೋಕಸಭೆ ಸದಸ್ಯರನ್ನ ಗೆಲ್ಲಿಸಿ ದೇವೇಗೌಡರನ್ನ ಪ್ರಧಾನಿ ಮಾಡಿದ್ದ ಕೀರ್ತಿ ಇದೆ. ಇವತ್ತು ದೇಶಕ್ಕೆ ದೊಡ್ಡ ಸಂದೇಶ ಹೋಗಬೇಕು ಎಂದರು.
ಅಂಬೇಡ್ಕರ್ ದೇಶದಕ್ಕೆ ಸಂವಿಧಾನ ಬರೆದ ವ್ಯಕ್ತಿ. ಇದೇ ಸಂದೇಶವನ್ನು 800 ವರ್ಷಗಳ ಹಿಂದೆ ಬಸವಣ್ಣ ಕೊಟ್ಟರು. ಇವತ್ತು ಏಕಾಏಕಿ ಅಮಿಶ್ ಶಾ ಭೇಟಿ ಮಾಡಿ ಫೋಟೋ ತೆಗೆಸಿಕೊಂಡು ಮೈತ್ರಿ ಅಂದರು. ಜೆಡಿಎಸ್ ಜಾತ್ಯಾತೀತ ತತ್ವದ ಸಿದ್ದಾಂತ. ಎರಡು ದಿನದ ಹಿಂದೆ ಹೇಳಿದ್ದೆ ದೇವೇಗೌಡರ ಮನೆಗೆ ಅಮಿಶ್ ಶಾ ಬರ್ಲಿ, ಮೊದಲು ಬಿಜೆಪಿ ಸಿದ್ದಾಂತ ನಾವು ಒಪ್ಪಿಕೊಳ್ಳಬೇಕು. ಅವೆಲ್ಲವೂ ನಾವು ಮಾಡುತ್ತೇನೆ ಅಂದಿದ್ದರು. ಪಕ್ಷ ಕುಟುಂಬದ ಸ್ವತ್ತು ಅಲ್ಲ, ಸರ್ವರ ಅಭಿಪ್ರಾಯ ಬಹಳ ಮುಖ್ಯ ಎಂದು ಹೇಳಿದರು.
ನಿಮ್ಮನ ಪ್ರಧಾನಿ ಮಾಡಿದ್ದು ಜಾತ್ಯಾತೀತ ತತ್ವ
ಜಿಲ್ಲಾ ಅಧ್ಯಕ್ಷರು ಕರೆಯಲಿಲ್ಲ. ನನ್ನ ಸಂಪರ್ಕದಲ್ಲಿ ಶಾಸಕರು ಇದ್ದಾರೆ. ಕೋರ್ ಕಮಿಟಿ ಮಾಡಿ ಸಾಧಕ ಬಾಧಕ ಮಾಡುತ್ತೇನೆ. ನಾವು ಮೈತ್ರಿ ಮಾಡಿಕೊಂಡರೆ ನಾಲ್ಕು ಸೀಟು ಸಿಗುತ್ತೆ. ನಾನು ಶಕ್ತಿ ಪ್ರದರ್ಶನ ಮಾಡಬಹುದಿತ್ತು. ತಪ್ಪು ಸಂದೇಶ ಕೊಡಬೇಡಿ ಎಂದು ದೇವೇಗೌಡರಿಗೆ ನಾನು ಮನವಿ ಮಾಡುತ್ತೇನೆ. ನಿಮ್ಮನ ಪ್ರಧಾನಮಂತ್ರಿ ಮಾಡಿದ್ದು ಜಾತ್ಯಾತೀತ ತತ್ವ. ಪ್ರಧಾನಿ ಮಂತ್ರಿ ಮಾಡಿ, ಸೀತಾರಾಮ್ ಕೇಸರ್ ಬೆಂಬಲ ವಾಪಸ್ ಪಡೆದಿದ್ದಕ್ಕೆ ಸರ್ಕಾರ ಬಿತ್ತು. ಅದಕ್ಕೆ ಬಿಜೆಪಿಗೆ ಶಕ್ತಿ ಬಂತು ಎಂದು ಸಿ.ಎಂ ಇಬ್ರಾಹಿಂ ತಿಳಿಸಿದರು.