Monday, December 23, 2024

ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು : ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಚುರುಕುಗೊಂಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಸೋಮವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 2-3 ದಿನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಹಾಗು ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ ಸುರಿದಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಕಲೆಕ್ಷನ್ ಮಾಸ್ಟರ್: ಬಿಜೆಪಿ ಪೋಸ್ಟರ್​​ ವೈರಲ್​

ಉತ್ತರ ಒಳನಾಡಿನಲ್ಲಿ ಒಣ ಹವೆ ಇದೆ ಎಂದು ಹೇಳಿದೆ.ಇಂದು ಚಾಮರಾಜನಗರ ಜಿಲ್ಲೆಯ ಬಂಡೀಪುರದಲ್ಲಿ 5, ರಾಮನಗರ ಜಿಲ್ಲೆಯ ಕನಕಪುರದಲ್ಲಿ ಮತ್ತು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ 4, ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ 2, ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ 1 ಸೆ.ಮೀ ಮಳೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

RELATED ARTICLES

Related Articles

TRENDING ARTICLES