Thursday, December 19, 2024

ಬಸವರಾಜ ಬೊಮ್ಮಾಯಿ ಆರೋಗ್ಯ ಹೇಗಿದೆ? ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ಇಂದು 6 ಗಂಟೆ ಸುಮಾರಿಗೆ CABG (Coronary Artery Bypass Graft Surgery) ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಬೊಮ್ಮಾಯಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದು ಕಾರ್ಡಿಯೋಥೋರಾಸಿಕ್ ಸರ್ಜನ್ ಡಾ.ವಿವೇಕ್ ಜವಳಿ ತಿಳಿಸಿದ್ದಾರೆ. ಎರಡು ಅಥವಾ ಮೂರು ದಿನಗಳಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ವಿಶೇಷ ವಾರ್ಡ್​ಗೆ ಸ್ಥಳಾಂತರ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶೀಘ್ರ ಗುಣಮುಖರಾಗಿ ಬರಲಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವರಾಜ ಬೊಮ್ಮಾಯಿ ಆರೋಗ್ಯದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಮೊಣಕಾಲು ನೋವು ನಿಮಿತ್ತ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES