Sunday, January 19, 2025

ಯಾರೂ ಆಸ್ಪತ್ರೆಗೆ ನನ್ನನ್ನು ನೋಡಲು ಬರಬೇಡಿ : ಆಸ್ಪತ್ರೆಯಿಂದ ಬೊಮ್ಮಾಯಿ ಮನವಿ

ಬೆಂಗಳೂರು : ಯಾರೂ ಆಸ್ಪತ್ರೆಗೆ ನನ್ನನ್ನು ನೋಡಲು ಬರಬೇಡಿ ಎಂದು ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಈ ಕುರಿತು ಎಕ್ಸ್​(ಟ್ವಿಟ್ಟರ್)ನಲ್ಲಿ ಪೋಸ್ಟ್ ಮಾಡಿರುವ ಅವರು, ಆತ್ಮೀಯರೇ, ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೇ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ, ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ

ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು. ಇಂತಿ ನಿಮ್ಮ, ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳು ಎಂದು ಪೋಸ್ಟ್ ಮಾಡಿದ್ದಾರೆ.

ಶೀಘ್ರ ಗುಣಮುಖರಾಗಿ ಚೇತರಿಸಿಕೊಳ್ಳಲಿ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟ್ವೀಟ್‌ ಮಾಡಿ, ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜು ಬೊಮ್ಮಾಯಿ ಅವರು ಶೀಘ್ರ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಪೋಸ್ಟ್

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೋಮವಾರ ಟ್ವೀಟ್ ಮಾಡಿ, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದರು.

RELATED ARTICLES

Related Articles

TRENDING ARTICLES