Sunday, November 3, 2024

ಸಲಿಂಗ ವಿವಾಹ : ನಮಗೆ ಕಾನೂನು ಮಾಡುವ ಅಧಿಕಾರವಿಲ್ಲ ಎಂದ ಸುಪ್ರೀಂ ಕೋರ್ಟ್

ನವದೆಹಲಿ : ಭಾರತದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕೇ ಎಂಬುದಕ್ಕೆ ಸಂಬಂಧಿಸಿದ ತೀರ್ಪನ್ನು ಮಂಗಳವಾರ ಸುಪ್ರೀಂ ಕೋರ್ಟ್‌ ಪ್ರಕಟಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​ ಆದೇಶ ಓದುತ್ತಿದ್ದು, ನಮಗೆ ಕಾನೂನು ಮಾಡುವ ಅಧಿಕಾರ ಇಲ್ಲ. ಆದರೆ, ನ್ಯಾಯಾಲಯ ಕೇವಲ ಮಧ್ಯಪ್ರವೇಶ ಮಾಡಬಹುದು ಎಂದು ಹೇಳಿದರು. ಸಲಿಂಗಕಾಮ ಅಥವಾ ವಿಲಕ್ಷಣತೆಯು ನಗರದ ಪರಿಕಲ್ಪನೆಯಲ್ಲ ಅಥವಾ ಸಮಾಜದ ಮೇಲ್ವರ್ಗದವರಿಗೆ ಸೀಮಿತವಾಗಿಲ್ಲ ಎಂದು ತಿಳಿಸಿದರು.

ಭಾರತದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ದೊರಕಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಇಂದು ನಡೆಸಿತು. 10 ದಿನಗಳ ಕಾಲ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಸಂಜಯ್‌ ಕಿಶನ್‌ ಕೌಲ್‌, ಎಸ್‌. ರವೀಂದ್ರ ಭಟ್‌, ಹಿಮಾ ಕೊಹ್ಲಿ ಮತ್ತು ಪಿ.ಎಸ್‌ ನರಸಿಂಹ ಅವರ ನೇತೃತ್ವದ ಸಾಂವಿಧಾನಿಕ ಪೀಠವು ಮೇ 11ರಂದು ತೀರ್ಪು ಕಾಯ್ದಿರಿಸಿತ್ತು.

ಸಲಿಂಗ ಕೂಟಕ್ಕೆ ಮಾನ್ಯತೆ ನೀಡುವುದು ಶಾಸಕಾಂಗಕ್ಕೆ ಬಿಟ್ಟ ವಿಚಾರ. ಆದರೆ, ಸಲಿಂಗ ಜೋಡಿಗೆ ವಿವಾಹದ ಹಣಪಟ್ಟಿ ಇಲ್ಲದೆಯೂ ಸಾಮಾಜಿಕ ಮತ್ತು ಇತರೆ ಸೌಲಭ್ಯ ಕಲ್ಪಿಸುವುದನ್ನು ಖಾತರಿಪಡಿಸಬೇಕು ಎಂದು ವಿಚಾರಣೆ ವೇಳೆ ಪೀಠ ಹೇಳಿತ್ತು. ವಿವಾಹಗಳು ಕೇವಲ ಶಾಸನಬದ್ಧ ರಕ್ಷಣೆ ಮಾತ್ರವೇ ಅಲ್ಲದೆ ಸಾಂವಿಧಾನಿಕ ರಕ್ಷಣೆ ಪಡೆಯಲೂ ಅರ್ಹವಾಗಿರುತ್ತವೆ ಎಂದು ಇದೇ ವೇಳೆ ನ್ಯಾಯಾಲಯ ಅವಲೋಕನ ಮಾಡಿತ್ತು.

RELATED ARTICLES

Related Articles

TRENDING ARTICLES