Wednesday, December 18, 2024

ಅಸಭ್ಯ ವರ್ತನೆ : ಚಿನ್ನದ ವ್ಯಾಪಾರಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ

ಚಿಕ್ಕಮಗಳೂರು : ಚಿನ್ನದಂಗಡಿಗೆ ಬರುವ ಮಹಿಳೆಯರ ಜೊತೆ ಮಾಲೀಕ ಅಸಭ್ಯ ವರ್ತನೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಂ.ಜಿ. ರಸ್ತೆಯಲ್ಲಿ ನಡೆದಿದೆ. ಈ ಹಿನ್ನೆಲೆ ಚಿನ್ನದಂಗಡಿ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ.

ಅಪ್ರಾಪ್ತ ವಯಸ್ಸಿನ ಬಾಲಕಿಯ ಜೊತೆ ಅಸಭ್ಯ ವರ್ತನೆ ಮಾಡಿದ್ದಾನೆ. ಅಸಭ್ಯ ವರ್ತನೆ ಮಾಡುತ್ತಿದ್ದ ಚಿನ್ನದ ವ್ಯಾಪಾರಿಗೆ ಧರ್ಮದೇಟು ನೀಡಿದ್ದಾರೆ. ಬಾಲಕಿಯ ತಾಯಿ ಸೇರಿದಂತೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಅಮೀರ್ ಎಂಬ ಚಿನ್ನದ ವ್ಯಾಪಾರಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಚಿನ್ನದಂಗಡಿಗೆ ಬಂದಿದ್ದ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಅಮೀರ್​ಗೆ ಬಾಲಕಿಯ ತಾಯಿ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಾಲ್ಕು ದಿನದ ಹಿಂದೆ ನಡೆದ ಘಟನೆಯ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES