Wednesday, January 22, 2025

ಪಾರಂಪರಿಕ ಕಟ್ಟಡಗಳಲ್ಲಿ ಕೆಮಿಕಲ್​ ಅರಿಶಿಣ ಕುಂಕುಮ ಬಳಸುವಂತಿಲ್ಲ: ಸಿಎಂ

ಬೆಂಗಳೂರು : ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಕುಂಕುಮಕ್ಕೆ ನಿರ್ಬಂಧ ಹೇರಲಾಗಿದೆ. ಇದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ.

ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು‌ ಆದೇಶ ಹೊರಡಿಸಲಾಗಿದೆ. ಈ ಆದೇಶದ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದೆ ಎಂದು ವಿಪಕ್ಷಗಳು ಆರೋಪಿಸಿವೆ.

ಇದನ್ನೂ ಓದಿ: ಕಾವೇರಿಗಾಗಿ ಕರವೇ ವತಿಯಿಂದ ದೆಹಲಿಯಲ್ಲಿ ಪ್ರತಿಭಟನೆ!

ಇನ್ನು ಅಸಮಾಧಾನದ ಬಳಿಕ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈಗ ಹೊರಡಿಸಿರುವ ಆದೇಶ ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುತ್ತದೆ. ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ.

ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಸಿಎಂ ಎಕ್ಸ್​ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

 

RELATED ARTICLES

Related Articles

TRENDING ARTICLES