Monday, December 23, 2024

ಡಿಸಿಎಂ ಡಿಕೆಶಿ ಗೆ ಮತ್ತೆ ಸಂಕಷ್ಟ: ಅರ್ಜಿ ವಜಾಗೊಳಿಸಿದ ಹೈಕೋರ್ಟ್​!

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ರ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

2013-2018 ರ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್​ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ನ್ಯಾಯಮೂರ್ತಿ ಕೆ.ನಟರಾಜನ್ ನೇತೃತ್ವದ ಪೀಠ ಅರ್ಜಿಯನ್ನು ವಜಾಗೊಳಿಸಿ ತೀರ್ಪನ್ನು ಕಾಯ್ದಿರಿಸಿದೆ.

ಇದನ್ನೂ ಓದಿ: ಪಾರಂಪರಿಕ ಕಟ್ಟಡಗಳಲ್ಲಿ ಕೆಮಿಕಲ್​ ಅರಿಶಿಣ ಕುಂಕುಮ ಬಳಸುವಂತಿಲ್ಲ: ಸಿಎಂ

ಪ್ರಕರಣ ಸಂಬಂಧ ಡಿಕೆಶಿ ವಿರುದ್ದ ಚಾರ್ಜ್ ಶೀಟ್​ ಸಲ್ಲಿಸಲು ಕೋರ್ಟ್​ ಅನುಮತಿ ನೀಡಿದೆ, ಇದರೊಂದೊಗೆ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

RELATED ARTICLES

Related Articles

TRENDING ARTICLES