Monday, December 23, 2024

BJP-JDSಗೆ ಸುಳ್ಳು ಆರೋಪ ಮಾಡುವುದೇ ಕಸುಬು : ದಿನೇಶ್ ಗುಂಡೂರಾವ್

ಬೆಂಗಳೂರು : ಏನೂ ಕೆಲಸವಿಲ್ಲದೆ ನಿರುದ್ಯೋಗಿಗಳಾಗಿರುವ BJP-JDS ನವರಿಗೆ ನಮ್ಮ ಪಕ್ಷದ ವಿರುದ್ಧ ಸುಳ್ಳು ಆರೋಪ ಮಾಡುವುದೇ ಕಸುಬಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ ಅವರು, ಒಂದೇ ಸುಳ್ಳನ್ನು ನೂರು ಬಾರಿ ಹೇಳಿದರೆ ಅದು ಸತ್ಯವಾಗುತ್ತದೆ ಎಂಬ ಭ್ರಮೆಯಲ್ಲಿ ಎರಡೂ ಪಕ್ಷದ ನಾಯಕರು ತೇಲಾಡುತ್ತಿದ್ದಾರೆ. ಆದರೆ ಜನರು BJP-JDS ನವರು ತಿಳಿದುಕೊಂಡಷ್ಟು ದಡ್ಡರಲ್ಲ. ಜನರಿಗೆ ಸತ್ಯ ಗೊತ್ತಿದೆ‌ ಎಂದು ಹೇಳಿದ್ದಾರೆ.

ಮೊನ್ನೆ ನಡೆದ IT ದಾಳಿಗೂ, ಯಾವುದೇ ರಾಜಕೀಯ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಸ್ವತಃ ಆದಾಯ ತೆರಿಗೆ ಇಲಾಖೆಯೇ ಸ್ಪಷ್ಟಪಡಿಸಿದೆ‌. ಆದರೂ BJP-JDS ನಾಯಕರು ‌ಮೈಮೇಲೆ ದೆವ್ವ ಬಂದಂತೆ ವರ್ತಿಸುತ್ತಿದ್ದಾರೆ. IT ಇಲಾಖೆ ನೇರವಾಗಿ‌ ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತದೆ. ಹೀಗಿರುವಾಗ BJP-JDSನವರು ಏನನ್ನು ಸಾಧಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.

RELATED ARTICLES

Related Articles

TRENDING ARTICLES