Monday, December 23, 2024

ಮಹಿಳಾ ಉದ್ಯಮಿಗಳಿಗೆ ನೀಡುವ ಸಾಲ 5 ಕೋಟಿಗೆ ಹೆಚ್ಚಳ : ಸಿದ್ದರಾಮಯ್ಯ

ಬೆಂಗಳೂರು : ಸ್ತ್ರೀ ಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಮ್ಮ ಸರ್ಕಾರವು ಸ್ತ್ರೀ ಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಮಹಿಳೆಯರಿಗೆ ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಹಾಗೂ ಔದ್ಯೋಗಿಕ ಅವಕಾಶಗಳು ಮುಕ್ತವಾಗಿ ದೊರೆತಾಗ ಮಾತ್ರ ಆ ದೇಶ ಅಭಿವೃದ್ಧಿ ಸೂಚ್ಯಂಕದಲ್ಲಿ ಮುಂದಿರಲು ಸಾಧ್ಯ ಎಂದು ತಿಳಿಸಿದ್ದಾರೆ.

ಸಶಕ್ತ, ಸ್ವಾವಲಂಬಿ ಮಹಿಳಾ ಸಮುದಾಯದ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಆತಿಥ್ಯ, ಆರೈಕೆ ಮತ್ತು ಪ್ರವಾಸೋದ್ಯಮದಂತಹಾ ಸೇವಾ ವಲಯದಲ್ಲಿ ಮಹಿಳಾ ಉದ್ಯಮಿಗಳ ಪಾಲ್ಗೊಳ್ಳುವಿಕೆಗೆ ಪ್ರೋತ್ಸಾಹ ನೀಡಲು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಶೇ.4 ಬಡ್ಡಿದರಲ್ಲಿ ನೀಡಲಾಗುವ ಸಾಲದ ಮಿತಿಯನ್ನು ರೂ.2 ಕೋಟಿಯಿಂದ ರೂ.5 ಕೋಟಿಗೆ ಹೆಚ್ಚಿಸುವುದಾಗಿ ಬಜೆಟ್‌ ನಲ್ಲಿ ಘೋಷಿಸಿ, ಸಮಸಮಾಜದ ಅಡಿಪಾಯವನ್ನು ಮತ್ತಷ್ಟು ಭದ್ರಗೊಳಿಸಿದ್ದೇವೆ ಎಂದು ಹೇಳಿದ್ದಾರೆ.

ನವಯುಗಕ್ಕೆ ನಾಂದಿ ಹಾಡಿದ್ದೇವೆ

ಪ್ರಸಕ್ತ ಸಾಲಿನ ಬಜೆಟ್​ನಲ್ಲಿ ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗಾಗಿ 70,427 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟು, ಸ್ತ್ರೀ ಸಬಲೀಕರಣದ ನಿಟ್ಟಿನಲ್ಲಿ ನವಯುಗಕ್ಕೆ ನಾಂದಿ ಹಾಡಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES