Wednesday, January 15, 2025

ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ದೆಹಲಿ : ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ನವೆಂಬರ್​ 22ರವರೆಗೆ ವಿಸ್ತರಿಸಲಾಗಿದೆ.

ಸಿಸೋಡಿಯಾ ಅವರನ್ನು ಇಂದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಸಲ್ಲಿಸಲಾದ ಆರೋಪಪಟ್ಟಿಯಲ್ಲಿನ ದಾಖಲೆಗಳನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.

ಇದನ್ನೂ ಓದಿ: ಜೆಡಿಎಸ್​ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಜಾಗೊಳಿಸಿ ಮಾಜಿ ಪ್ರಧಾನಿ ದೇವೇಗೌಡ ಆದೇಶ!

ಆಗಸ್ಟ್ 2022 ರಲ್ಲೂ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿತ್ತು. ಜುಲೈ 31ರಂದು ಹೊಸ ಅಬಕಾರಿ ನೀತಿ ರದ್ದು ಆಮ್ ಆದ್ಮಿ ಪಕ್ಷದ ಮಹತ್ವಾಕಾಂಕ್ಷೆಯ ದೆಹಲಿ ಅಬಕಾರಿ ನೀತಿಯನ್ನು 31 ಜುಲೈ 2022 ರಂದು ರದ್ದುಗೊಳಿಸಲಾಗಿತ್ತು.

ಹೊಸ ನೀತಿಯನ್ನು ರದ್ದುಗೊಳಿಸಿದ ನಂತರ, ದೆಹಲಿ ಸರ್ಕಾರವು ನವೆಂಬರ್ 17, 2020 ರ ಮೊದಲು ಜಾರಿಗೆ ತಂದ ಹಳೆಯ ಅಬಕಾರಿ ಆಡಳಿತವನ್ನು ಮರಳಿ ತರಲು ನಿರ್ಧರಿಸಿತ್ತು.

RELATED ARTICLES

Related Articles

TRENDING ARTICLES