ದೆಹಲಿ : ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿರುವ ಸಂದರ್ಭದ ನಡುವೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗ್ತಿದೆ. ಈ ಹಿನ್ನೆಲೆ ದೆಹಲಿಯಲ್ಲಿ ಕರವೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.
ಕರವೆ ನಾರಾಯಣ ಗೌಡ ಬಣದಿಂದ ಪ್ರತಿಭಟನೆ ಆರಂಭವಾಗಿದೆ. ದೆಹಲಿಯ ಜಂಪತ್ ಮಂತರ್ನಲ್ಲಿ ಕಾವೇರಿ ಕಹಳೆ ಮೊಳಗಿಸಲಾಗಿದೆ. ಕಾವೇರಿ ಸಮಸ್ಯೆ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗ್ತಿದೆ. ಮಧ್ಯಾಹ್ನ ಒಂದು ಗಂಟೆಯವರೆಗೂ ಧರಣಿ ನಡೆಸಲಿದ್ದಾರೆ. ಧರಣಿ ನಂತರ ಕರವೆ ಮುಖಂಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.
ಇದನ್ನೂ ಓದಿ: ಸಿಎಂ ಇಬ್ರಾಹಿಂಗೆ ಪದಚ್ಯುತಿ ಭಾಗ್ಯ?
ಪ್ರತಿಭಟನಾಕಾರರಲ್ಲಿ ಕೇವಲ ಇಬ್ಬರಿಗೆ ಮಾತ್ರ ಪ್ರಧಾನಿ ಭೇಟಿಗೆ ಅವಕಾಶ ನೀಡಲಾಗಿದ್ದು ಕರವೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಮತ್ತು ದೆಹಲಿ ಕನ್ನಡ ಸಂಘದ ಅಧ್ಯಕ್ಷ ನಾಗರಾಜ್ಗೆ ಮಾತ್ರ ಪ್ರಧಾನಿ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಪ್ರಧಾನಿ ಭೇಟಿಯಾಗಿ ಸಂಕಷ್ಟ ಸೂತ್ರ ಜಾರಿ ಮಾಡುವಂತೆ ಮುಖಂಡರು ಆಗ್ರಹಿಸಲಿದ್ದಾರೆ.