Wednesday, January 22, 2025

PAK vs AUS : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬಿಗಿ ಬಂದೋಬಸ್ತ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಚಿನ್ನಸ್ವಾಮಿ‌ ಸ್ಟೇಡಿಯಂ ಸುತ್ತಮುತ್ತ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.

ಡಾಗ್ ಸ್ಕ್ವಾಡ್ ಸ್ಟೇಡಿಯಂನ‌ ಒಳಗೆ ಪ್ರೇಕ್ಷಕರ ಗ್ಯಾಲರಿ ಸೇರಿದಂತೆ ಸಂಪೂರ್ಣ ಗ್ರೌಡ್ ಸುತ್ತಮುತ್ತ ತಪಾಸಣೆ ನಡೆಸಿದೆ. ಇನ್ನು, ಈ ಪಂದ್ಯದ ವೇಳೆ 700ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು. ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್, ಕೇಂದ್ರ ವಿಭಾಗದ ಡಿಸಿಪಿ ಟಿ.ಹೆಚ್ ಶೇಖರ್ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

ಕ್ರೀಡಾಭಿಮಾನಿ ಪ್ರೇಕ್ಷಕರು ಟಿಕೆಟ್ ಹಿಂದೆ ನೀಡಲಾಗಿರುವ ನಿಬಂಧನೆಯನ್ನು ಪಾಲಿಸಲು ಸೂಚಿಸಲಾಗಿದೆ. ಜೊತೆಗೆ ಬೆಳಗ್ಗೆ 7 ರಿಂದ ರಾತ್ರಿ 11 ರವರೆಗೂ, M.G ರೋಡ್, ಕ್ವೀನ್ಸ್ ರೋಡ್, ರಾಜಭವನ ರಸ್ತೆ, ಕಬ್ಬನ್ ರಸ್ತೆ ಸೇರಿದಂತೆ ಸುತ್ತಮುತ್ತಾ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಸುಗಮ ಸಂಚಾರಕ್ಕೆ ಬಿಎಂಟಿಸಿ, ಮೆಟ್ರೋ ಬಳಸಲು ಸೂಚನೆ ನೀಡಲಾಗಿದೆ.

ಪಾಕಿಸ್ತಾನ ತಂಡ

ಬಾಬರ್ ಅಝಂ (ನಾಯಕ), ಶಾದಾಬ್ ಖಾನ್, ಮುಹಮ್ಮದ್ ರಿಜ್ವಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಸೌದ್ ಶಕೀಲ್, ಫಖರ್ ಜಮಾನ್, ಹಾರಿಸ್ ರೌಫ್, ಹಸನ್ ಅಲಿ, ಇಫ್ತಿಕರ್ ಅಹ್ಮದ್, ಮುಹಮ್ಮದ್ ನವಾಜ್, ಮುಹಮ್ಮದ್ ವಾಸಿಂ ಜೂನಿಯರ್ , ಅಘಾ ಸಲ್ಮಾನ್, ಶಾಹೀನ್ ಶಾ ಅಫ್ರಿದಿ, ಒಸಾಮಾ ಮಿರ್

ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್

RELATED ARTICLES

Related Articles

TRENDING ARTICLES