Thursday, December 19, 2024

ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಹೋರಾಟಗಾರರ ಮೇಲಿನ ಪ್ರಕರಣಗಳ ಕಡತವನ್ನು ಸಚಿವ ಸಂಪುಟ ಉಪ ಸಮಿತಿಯ ಮುಂದೆ ತಂದು ಅಗತ್ಯ ಕ್ರಮ ಕೈಗೊಂಡು, ಕ್ಯಾಬಿನೆಟ್ ಮುಂದೆ ತರುವಂತೆ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಧಾನ ಪರಿಷತ್‌ ಶಾಸಕ ದಿನೇಶ್ ಗೂಳಿಗೌಡ ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಗಾಗಿ ನಡೆದಿದ್ದ ಹೋರಾಟಗಳಲ್ಲಿ ದಾಖಲಾಗಿದ್ದ ಪ್ರಕರಣಗಳನ್ನ ವಾಪಸ್ ಪಡೆಯುವಂತೆ ಪತ್ರ ಬರೆದಿದ್ದರು.

ಇದಕ್ಕೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣಗಳನ್ನು ಹಿಂಪಡೆಯುವ ವಿಚಾರವಾಗಿ ಸಚಿವ ಸಂಪುಟ ಉಪ ಸಮಿತಿಯ ಮುಂದೆ ಕಡತ ಮಂಡಿಸಲು ಅಗತ್ಯ ಕ್ರಮ ಕೈಗೊಂಡು ಕ್ಯಾಬಿನೆಟ್ ಮುಂದೆ ತರಬೇಕು ಎಂದು ಗೃಹ ಸಚಿವರಿಗೆ ಸೂಚನೆ ನೀಡಿದ್ದಾರೆ. ಮನವಿಗೆ ಶೀಘ್ರವಾಗಿ ಸ್ಪಂದಿಸಿದ ಸಿಎಂಗೆ ಶಾಸಕ ದಿನೇಶ್ ಗೂಳಿಗೌಡ ಧನ್ಯವಾದ ಸಲ್ಲಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಯ ಹೋರಾಟಗಳಲ್ಲಿ ಭಾಗವಹಿಸಿದ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ವಾಪಾಸು ಪಡೆಯಲು ನಿರ್ಧರಿಸಿದ್ದೇವೆ. ಈ ಪ್ರಕರಣಗಳಿಗೆ ಸಂಬಂಧಿಸಿದ ಕಡತವನ್ನು ಸಚಿವ ಸಂಪುಟ ಉಪ ಸಮಿತಿಯ ಮುಂದಿಟ್ಟು ಅಗತ್ಯ ಕ್ರಮ ಕೈಗೊಂಡು, ಕ್ಯಾಬಿನೆಟ್ ಮುಂದೆ ಹಾಜರುಪಡಿಸುವಂತೆ ಗೃಹ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES