Saturday, November 2, 2024

ಹೊಸ ಸರ್ಕಾರಿ ಕಾರು ಬೇಡ ಎಂದ ಸಚಿವ ಸಂತೋಷ್ ಲಾಡ್

ಬೆಂಗಳೂರು : ರಾಜ್ಯ ಕಾಂಗ್ರೆಸ್​ ಸರ್ಕಾರ ತನ್ನ ಸಚಿವರಿಗೆ ಹೊಚ್ಚ ಹೊಸ ಸರ್ಕಾರಿ ಕಾರುಗಳನ್ನು ವಿತರಿಸುತ್ತಿದೆ. ಬಹುತೇಕ ಎಲ್ಲ ಸಚಿವರುಗಳು ತಮಗೆ ಇಂಥದ್ದೇ ಕಾರು ಬೇಕು, ಅದಕ್ಕೆ ಇಂಥದ್ದೇ ನಂಬರ್ ಇರಬೇಕು ಎಂದೆಲ್ಲ ಬೇಡಿಕೆ ಸಲ್ಲಿಸುತ್ತಿದ್ದಾರೆ.

ಈ ನಡುವೆ ರಾಜ್ಯದ ಸಚಿವರೊಬ್ಬರು ತಮಗೆ ಸದ್ಯ ಯಾವುದೇ ಹೊಸ ಕಾರಿನ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ, ಮಾದರಿಯಾಗಿದ್ದಾರೆ‌. ಅವರೇ ಕಾರ್ಮಿಕ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್. ಇನ್ನು ಸಂತೋಷ್ ಲಾಡ್ ಅವರ ಈ ನಡೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಶಂಸೆಗೆ ಪಾತ್ರವಾಗಿದ್ದು, ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ‌.

ಸಿದ್ದರಾಮಯ್ಯ ಸರ್ಕಾರದ ಅತ್ಯಂತ ಶಿಸ್ತಿನ ಹಾಗೂ ಪ್ರಾಮಾಣಿಕ ಸಚಿವರಲ್ಲೊಬ್ಬರಾಗಿರುವ ಸಂತೋಷ್ ಲಾಡ್ ತಮ್ಮ ಜನಪರ ನಿಲುವುಗಳಿಂದಲೇ ಹೆಚ್ಚು ಜನಪ್ರಿಯರಾದವರು. ರಾಜ್ಯದೆಲ್ಲೆಡೆ ತೀವ್ರ ಬರ ಆವರಿಸಿದೆ. ಮಳೆ-ಬೆಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಜನರ ತೆರಿಗೆ ಹಣವನ್ನು ವಿನಾಕಾರಣ ಪೋಲು ಮಾಡಬಾರದು ಎನ್ನುವ ನಿಲುವಿಗೆ ಸಚಿವ ಸಂತೋಷ್‌ ಲಾಡ್‌ ಬಂದಿದ್ದಾರೆ.

ಸಾರ್ವಜನಿಕ ವಲಯದಲ್ಲಿ ಆಕ್ರೋಶ

ಕಾಂಗ್ರೆಸ್ ಸರ್ಕಾರವೇ ರಾಜ್ಯದಲ್ಲಿ ಮಳೆ ಬೆಳೆ ಇಲ್ಲ ಎಂದು 198 ತಾಲ್ಲೂಕುಗಳನ್ನ ಬರಗಾಲ ಅಂತಾ ಘೋಷಣೆ ಮಾಡಿದೆ. ಇದೀಗ ಸಚಿವರಿಗೆ ಐಷಾರಾಮಿ ಬೆಲೆ ಬಾಳುವ ಕಾರು ನೀಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿಬರುತ್ತಿದೆ.

RELATED ARTICLES

Related Articles

TRENDING ARTICLES