Monday, December 23, 2024

‘ನಮೋ ಭಾರತ್’ಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದಲ್ಲಿ ಭಾರತದ ಮೊದಲ ಸೆಮಿ ಹೈಸ್ಪೀಡ್ ಪ್ರಾದೇಶಿಕ ರೈಲು ಸೇವೆ ‘ನಮೋ ಭಾರತ್’ಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಉತ್ತರ ಪ್ರದೇಶದ ಸಾಹಿಬಾಬಾದ್ ಮತ್ತು ದುಹೈ ಡಿಪೋ ನಿಲ್ದಾಣಗಳನ್ನು ಸಂಪರ್ಕಿಸುವ ರೈಲನ್ನು ಪ್ರಧಾನಿ ಉದ್ಘಾಟಿಸಿದರು. ಇದರೊಂದಿಗೆ ಭಾರತದಲ್ಲಿ ಪ್ರಾದೇಶಿಕ ಕ್ಷಿಪ್ರ ರೈಲು ಸೇವೆ ಪ್ರಾರಂಭವಾಗಿದೆ.

‘ನಮೋ ಭಾರತ್’ ಒಂದು ಪರಿವರ್ತನೆಯ ಪ್ರಾದೇಶಿಕ ಅಭಿವೃದ್ಧಿ ಉಪಕ್ರಮವಾಗಿದೆ. ಇದು ಇಂಟರ್‌ಸಿಟಿ ಪ್ರಯಾಣಕ್ಕಾಗಿ ಹೈ-ಸ್ಪೀಡ್ ರೈಲುಗಳನ್ನು ಒದಗಿಸಲು ವಿನ್ಯಾಸಗೊಳಿಸುತ್ತದೆ ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿದೆ. ಉದ್ಘಾಟನೆ ಬಳಿಕ ಶಾಲಾ ಮಕ್ಕಳು ಮತ್ತು ಸಿಬ್ಬಂದಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ರೈಲಿನಲ್ಲಿ ಸಂಚಾರ ಮಾಡುವ ಮೂಲಕ ಸಂವಾದ ನಡೆಸಿದರು.

ನಾನು ಮೊದಲೇ ಹೇಳಿದ್ದೆ

ನಾಲ್ಕು ವರ್ಷಗಳ ಹಿಂದೆ, ನಾನು ದೆಹಲಿ-ಗಾಜಿಯಾಬಾದ್-ಮೀರತ್ ಪ್ರಾದೇಶಿಕ ಕಾರಿಡಾರ್ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದೇನೆ. ಇಂದು, ಸಾಹಿಬಾಬಾದ್‌ನಿಂದ ದುಹೈ ಡಿಪೋವರೆಗೆ ನಮೋ ಭಾರತ್ ಸೇವೆಗಳು ಪ್ರಾರಂಭವಾಗಿವೆ. ನಾನು ಮೊದಲೇ ಹೇಳಿದ್ದೆ ಮತ್ತು ನಾನು ಅದನ್ನು ಇಂದು ಹೇಳುತ್ತೇನೆ. Jiska Shilanyaas hum karte hain, uska udghatan bhi hum hi karte hain ಎಂದು ಹೇಳಿದರು.

RELATED ARTICLES

Related Articles

TRENDING ARTICLES