Wednesday, January 22, 2025

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂದು ಗೊತ್ತೇ ಇಲ್ಲ: ಸಚಿವ ಶರಣಪ್ರಕಾಶ್​ ಪಾಟೀಲ್​

ಕಲಬುರ್ಗಿ: ಸೇಡಂ ಮತಕ್ಷೇತ್ರದಲ್ಲಿ ಸಚಿವ ಶರಣಪ್ರಕಾಶ ಪಾಟೀಲರ ಹೆಸರು ಪ್ರಸ್ತಾಪಿಸಿ ವ್ಯಕ್ತಿ ಆತ್ಮಹತ್ಯೆ ಪ್ರಕರಣ ಸಂಬಂಧ ಸ್ವತಃ ತಾವೇ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಕಲಬುರಗಿಯಲ್ಲಿ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರು ಎನ್ನುವುದು ನನಗೆ ಗೊತ್ತೇ ಇಲ್ಲ. ಆ ವ್ಯಕ್ತಿಯೊಂದಿಗೆ ನಾನು ಜೀವನದಲ್ಲಿ ಮಾತಾಡಿಯೂ ಇಲ್ಲ. ಅವರ ಕುಟುಂಬದವರೇ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿಗೆ ಡಿವೋರ್ಸ್ ಕೊಟ್ಟ ರಾಜ್ ಕುಂದ್ರಾ?

ಬಿಜೆಪಿಯವರು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಈ ರೀತಿ ಆರೋಪ ಮಾಡುತ್ತಿದ್ದಾರೆ. ಬಿಜೆಪಿಯವರು ಸೋಲಿನಿಂದ ಹತಾಶಾರಾಗಿ ಈ ರೀತಿ ಮಾತನಾಡುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲೇ ನಾನು ಈ ರೀತಿ ಎಂದೂ ದೌರ್ಜನ್ಯ ಮಾಡಿಲ್ಲ. ನನ್ನದೇನಿದ್ರೂ ಅಭಿವೃದ್ಧಿ ಮಾತ್ರ. ಲೋಕಸಭಾ ಚುನಾವಣೆ ಬರುತ್ತಿರುವ ಕಾರಣ ಬಿಜೆಪಿಯವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಈ ರೀತಿ ಆರೋಪ ಮಾಡುತ್ತಿದ್ದಾರೆ.

ಇದು ನನ್ನ ಮೇಲಿನ ಕಳಂಕ ಆಗೋದಿಲ್ಲ. ನಾನೇಕೆ ರಾಜೀನಾಮೆ ಕೊಡಬೇಕು. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ ಕಾನೂನು ತನ್ನ ರೀತಿಯಲ್ಲಿ ಕ್ರಮ ಕೈಗೊಳ್ಳಲಿ ಎಂದು ಅವರು ಹೇಳಿದರು.

RELATED ARTICLES

Related Articles

TRENDING ARTICLES